ಅರಕಲಗೂಡು: ‘2025- 26ನೇ ಸಾಲಿನ ಅನಕೃ ಪ್ರಶಸ್ತಿಗೆ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಸಂಗೀತ ವಿದ್ವಾಂಸ ಆರ್.ಕೆ. ಪದ್ಮನಾಭ ಅಭಿಮಾನಿಗಳ ಬಳಗದ ಅಧ್ಯಕ್ಷ ರಮೇಶ್ ವಾಟಾಳ್ ತಿಳಿಸಿದ್ದಾರೆ.
ಪಟ್ಟಣದ ಶಿಕ್ಷರ ಭವನದಲ್ಲಿ ಜುಲೈ 20 ರಂದು ನಡೆಯುವ ‘ಅನಕೃ ಒಂದು ನೆನಪು’ ವಾರ್ಷಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿಫಲಕವನ್ನು ಒಳಗೊಂಡಿದೆ. ಸಂಗೀತ ವಿದ್ವಾಂಸ ಆರ್.ಕೆ.ಪದ್ಮನಾಭ ಪ್ರಶಸ್ತಿ ಪ್ರದಾನ ಮಾಡುವರು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.