ADVERTISEMENT

ಹನುಮ ಜಯಂತಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 15:30 IST
Last Updated 16 ಏಪ್ರಿಲ್ 2022, 15:30 IST
ಹಾಸನದ ರೈಲು ನಿಲ್ದಾಣ ಎದುರು ಆಂಜನೇಯ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು
ಹಾಸನದ ರೈಲು ನಿಲ್ದಾಣ ಎದುರು ಆಂಜನೇಯ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು   

ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಶನಿವಾರ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ರೈಲ್ವೆ ನಿಲ್ದಾಣದ ಎದುರಿನ ಮಾರುತಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಪೂಜಾ ಕಾರ್ಯಗಳು ನಡೆದವು. ದೇವರ ಮೂರ್ತಿಯನ್ನು ಹೂವಿನಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.

ದೇವಿಗೆರೆ ಸರ್ಕಲ್‌ ಬಳಿ ನೀರುವಾಗಿಲು ಆಂಜನೇಯ, ಸೀತಾ ರಾಮಾಂಜನೇಯ ದೇವಸ್ಥಾನ, ಆಡುವಳ್ಳಿ, ದೊಡ್ಡಪುರದ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಗ್ರಾಮೀಣ ಭಾಗಗಳಲ್ಲಿಯೂ ಹನುಮ ಜಯಂತಿಯನ್ನು ಆಚರಿಸಲಾಯಿತು. ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ADVERTISEMENT

ಕೊರೊನಾ ಸೋಂಕು ಭೀತಿಯಿಂದಾಗಿ ಕಳೆದ ವರ್ಷ ಹನುಮ ಜಯಂತಿ ಕಳೆಗುಂದಿತ್ತು. ಈ ವರ್ಷ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆಯಾದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.