ADVERTISEMENT

ಕಿರುಕುಳ: ಗ್ರಾ.ಪಂ ಮಾಜಿ ಅಧ್ಯಕ್ಷ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 3:14 IST
Last Updated 10 ಫೆಬ್ರುವರಿ 2021, 3:14 IST

ಬೇಲೂರು: ಮಾನಸಿಕ ಕಿರುಕುಳ ಹಾಗೂ ಬಹಿಷ್ಕಾರದ ಬೆದರಿಕೆಗೆ ಹೆದರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಸಂತ್ ಎಂಬುವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲ್ಲೂಕಿನ ನಾರ್ವೆಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾದನೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಸಂತ್‌ ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪತ್ನಿ ಶೋಭಾ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ನಾರ್ವೆಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ ಪ್ರಕಾಶ್ ಅವರು ಚುನಾವಣೆಗೆ ಸ್ಪರ್ಧಿಸುವ ಮುನ್ನ ಬಿಜೆಪಿ ಬೆಂಬಲ ಪಡೆದಿದ್ದರು. ನಂತರ ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ವಸಂತ ಅವರ ಒತ್ತಡವೇ ಕಾರಣ ಎಂದು ಭಾವಿಸಿದ ಬಿಜೆಪಿ ಕಾರ್ಯಕರ್ತರು, ವಸಂತ ಅವರನ್ನು ನಿಂದಿಸಿ, ಬಹಿಷ್ಕಾರದ ಬೆದರಿಕೆ ಹಾಕಿದ್ದರು. ಇದರಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.