ಹಾಸನ: ನಗರದ ಸೆಂಟ್ರಲ್ ಕಾಮರ್ಸ್ ಕಾಲೇಜು 2024-25 ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ಸತತ 8 ನೇ ಬಾರಿ ಶೇ 100 ರಷ್ಟು ಫಲಿತಾಂಶ ದಾಖಲಿಸಿದ್ದು, ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.
ಕಾಲೇಜಿನ ಗಗನ್ ಗೌಡ ಪಿ. 593 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 7 ನೇ ರ‍್ಯಾಂಕ್ ಪಡೆದಿದ್ದಾರೆ. ರೇವತಿ ಬಿ.ಸಿ. 591 ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದಿದ್ದಾರೆ. ಅನುಶ್ರೀ, ಚಿನ್ಮಿತಾ ಹಾಗೂ ಸ್ಪೂರ್ತಿ ಎಸ್ 590 ಅಂಕಗಳನ್ನು ಪಡೆದು ಜಿಲ್ಲೆಗೆ ತೃತೀಯ ಹಾಗೂ ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಯ ಮೊದಲ 10 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಸೆಂಟ್ರಲ್ ಕಾಮರ್ಸ್ ಕಾಲೇಜಿನ ವಿದ್ಯಾರ್ಥಿಗಳು ಪಡೆದಿರುವುದು ವಿಶೇಷ.
122 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ. ಉತ್ತಮ ಫಲಿತಾಂಶ ಪಡೆದ ಕಾಲೇಜಿನ ಎಲ್ಲ ವಿದ್ಯಾರ್ಥಿಗಳನ್ನು ಪ್ರಾಂಶುಪಾಲೆ ಪರಿಮಳಾ ಮಹೇಶ್ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.