ADVERTISEMENT

ಹೊಳೆನರಸೀಪುರ ಬಳಿ ಹಾಸನ–ಮೈಸೂರು ಹೆದ್ದಾರಿ ಮೇಲ್ಸೇತುವೆ ತಡೆಗೋಡೆ ಕುಸಿತ

​ಪ್ರಜಾವಾಣಿ ವಾರ್ತೆ
Published 28 ಜುಲೈ 2023, 5:17 IST
Last Updated 28 ಜುಲೈ 2023, 5:17 IST
   

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿ ಬಳಿ ಹಾಸನ–ಮೈಸೂರು ಹೆದ್ದಾರಿ ಮೇಲ್ಸೇತುವೆಯ ತಡೆಗೋಡೆ ಕುಸಿದಿದ್ದು, ವಾಹನ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ.

ಶುಕ್ರವಾರ ಬೆಳಿಗ್ಗೆ ತಡೆಗೋಡೆ ಕುಸಿದಿದಿದ್ದು, ಮಣ್ಣು ಹೊರಗೆ ಬರಲಾರಂಭಿಸಿದೆ. ಇದರಿಂದಾಗಿ ಮೇಲ್ಭಾಗದ ಹೆದ್ದಾರಿಯಲ್ಲಿ ವಾಹನಗಳು ಸಂಚರಿಸಿದರೆ, ಅಪಾಯ ಉಂಟಾಗುವ ಸಾಧ್ಯತೆ ಇದೆ. ಅಪಾಯ ಉಂಟಾಗುವ ಮೊದಲೇ ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಹಿಂದೆಯೂ ಇದೇ ಸ್ಥಳದಲ್ಲಿ ತಡೆಗೋಡೆ ಕುಸಿತವಾಗಿತ್ತು. ಮತ್ತೊಮ್ಮೆ ತಡೆಗೋಡೆ ಕುಸಿದಿದ್ದು, ಶಾಶ್ವತ ಕಾಮಗಾರಿ ನಡೆಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.