ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಈ ವರ್ಷದ ದರ್ಶನ ಶುಕ್ರವಾರದಿಂದ ಆರಂಭವಾಯಿತು. ಸರದಿಯಲ್ಲಿ ಬಂದು ಭಕ್ತರು ದೇವಿಯ ದರ್ಶನ ಪಡೆದರು. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಗುರುವಾರ ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ತೆರೆಯಲಾಯಿತು. ಮಧ್ಯಾಹ್ನ 12.10 ಕ್ಕೆ ಅರಸು ವಂಶಸ್ಥ ನಂಜರಾಜೇ ಅರಸ್ ಅವರು ಗೊನೆಯುಳ್ಳ ಬಾಳೆಗೊನೆ ಕಡಿದ ಬಳಿಕ ಬಾಗಿಲನ್ನು ತೆರೆಯಲಾಯಿತು. ಗಣ್ಯರಿಗೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30 ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ₹1 ಸಾವಿರ ಹಾಗೂ ₹300 ದರದ ವಿಶೇಷ ದರ್ಶನದ ಟಿಕೆಟ್ ಲಭ್ಯವಿದ್ದು, ಭಕ್ತರು ಆನ್ ಆನ್‌ಲೈನ್‌ನಲ್ಲಿ ಟಿಕೆಟ್ ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.