ಹಾಸನ: ನಗರದ ಅಧಿದೇವತೆ ಹಾಸನಾಂಬ ದರ್ಶನೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಮಂಗಳವಾರ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಯಿತು.
ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರನ್ನು ಆಹ್ವಾನಿಸಲಾಯಿತು. ನಂತರ ಸಚಿವರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಆಹ್ವಾನ ನೀಡಲಾಯಿತು.
ಹಾಸನಾಂಬ ಮತ್ತು ಸಿದ್ಧೇಶ್ವರ ಜಾತ್ರಾ ಮಹೋತ್ಸವವು ಅಕ್ಟೋಬರ್ 9ರಿಂದ 23ರವರೆಗೆ ಜರುಗಲಿದ್ದು, ಜಿಲ್ಲಾಡಳಿತ ಹಾಗೂ ಹಾಸನಾಂಬ ದೇವಾಲಯ ಆಡಳಿತ ಮಂಡಳಿಯಿಂದ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತಾ, ದೇವಾಲಯದ ಆಡಳಿತಾಧಿಕಾರಿ, ಉಪ ವಿಭಾಗಾಧಿಕಾರಿ ಮಾರುತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.