ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಕಡಿಮೆ ವಯಸ್ಸಿನವರು ಬಲಿಯಾಗುತ್ತಿರುವ ಆತಂಕದ ನಡುವೆ ಶನಿವಾರ ರಾತ್ರಿ ಮೊಬೈಲ್ ಅಂಗಡಿ ಮಾಲೀಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಗರದ ಸತ್ಯಮಂಗಲ ಬಡಾವಣೆಯಲ್ಲಿ ವಾಸವಾಗಿದ್ದ ಚೇತನ್ (35) ಮೃತರು. ಕಿಕ್ಕೇರಿ ಮೂಲದ ಚೇತನ್, ಹಾಸನದ ಹಳೇ ಬಸ್ ನಿಲ್ದಾಣ ಸಮೀಪ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಪತ್ನಿ ಮತ್ತು ಮಗುವಿನೊಂದಿಗೆ ಸತ್ಯಮಂಗಲ ಬಡಾವಣೆಯಲ್ಲಿ ನೆಲೆಸಿದ್ದ ಅವರು, ರಾತ್ರಿ ಊಟಕ್ಕೆ ಕುಳಿತುಕೊಳ್ಳುವ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿತು. ನೋವಿನ ಬಗ್ಗೆ ತಿಳಿಸಿ ಎದ್ದೇಳುವಾಗಲೇ ಕುಸಿದು ಬಿದ್ದ ಅವರನ್ನು ಪತ್ನಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.