ADVERTISEMENT

ಹಾಸನ: ಮನೆ ಬೀಗ ಮುರಿದು ₹4.90 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 6:06 IST
Last Updated 17 ಫೆಬ್ರುವರಿ 2026, 6:06 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಮನೆಯ ಬೀಗ ಮುರಿದು ₹1.50 ಲಕ್ಷ ನಗದು, ₹2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.

ಗ್ರಾಮದ ಧನಂಜ ಅವರು ಫೆ.15 ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ ಮನೆದೇವರಿಗೆ ಹೋಗಿದ್ದರು. ಪೂಜೆ ಮುಗಿಸಿಕೊಂಡು ಮಧ್ಯಾಹ್ನ ವಾಪಸ್ ಮನೆಗೆ ಬಂದಾಗ, ಮನೆಯ ರೂಂನ ಬೀರುವಿನಲ್ಲಿ ಇಟ್ಟಿದ್ದ ₹1.50 ಲಕ್ಷ ನಗದು, ₹2 ಲಕ್ಷ ಮೌಲ್ಯದ 28 ಗ್ರಾಂ ಚಿನ್ನಾಭರಣ ಕಳವಾಗಿರುವುದು ಗೊತ್ತಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಅರಸೀಕೆರೆ ತಾಲ್ಲೂಕಿನ ಬಂದೂರು ಗ್ರಾಮದ ಮನೆಯ ಬೀರುವಿನಲ್ಲಿ ಇಟ್ಟಿದ್ದ ₹1.40 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.

ಗ್ರಾಮದ ಕಾವ್ಯಾ ಅವರು ಫೆ.15 ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ ಹೋಗಿದ್ದು, ಮಧ್ಯಾಹ್ನ ವಾಪಸ್ ಬಂದು ನೋಡಿದಾಗ, ಬೀರುವಿನ ಲಾಕರ್ ಅನ್ನು ಮುರಿದು, 30 ಗ್ರಾಂ ಚಿನ್ನಾಭರಣ ಕಳವು ಮಾಡಿರುವುದು ಗೊತ್ತಾಗಿದೆ. ಜಾವಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.