ADVERTISEMENT

ಹಾಸನ | ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 3:01 IST
Last Updated 19 ನವೆಂಬರ್ 2025, 3:01 IST
ಸಿಲಿಂಡರ್‌
ಸಿಲಿಂಡರ್‌   

ಹಾಸನ: ಅರಕಲಗೂಡಿನ ಹೆಂಟಿಗೆರೆ ಗ್ರಾಮದ ಶೆಡ್‌ನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಆಸ್ಸಾಂನ ಕಾರ್ಮಿಕರಾದ ಅಲಿಮ್ ಬೇಗಂ, ರೋಹಿತ್ ಖಾತನ್, ಇಸ್ತಾರ್ ಉಲ್ಲ, ಅಹಿಸ್ಲಮ್ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಿಲಿಂಡ‌ರ್ ಸ್ಫೋಟಗೊಂಡಿದೆ. ಮನೆಯ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಸ್ಫೋಟದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

4 ಜನರ ಪೈಕಿ ಇಬ್ಬರಿಗೆ ಕೈ ಕಾಲುಗಳು ಹೋಗಿದ್ದು‌, ಉಳಿದಿಬ್ವರ ಚರ್ಮ ಸುಟ್ಟಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಸ್ಥಳ ಪರಿಶೀಲನೆ ನಡೆಸಿದರು. ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.