ADVERTISEMENT

ಹಾಸನ | ರಸ್ತೆ ಒತ್ತುವರಿ ಗುರುತಿಸಿ, ಕ್ರಮವಹಿಸಿ: ಜಿಲ್ಲಾಧಿಕಾರಿ ಕೆ.ಎಸ್.ಲತಾ

ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 3:13 IST
Last Updated 30 ಡಿಸೆಂಬರ್ 2025, 3:13 IST
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾತನಾಡಿದರು
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾತನಾಡಿದರು   

ಹಾಸನ: ಪಾದಾಚಾರಿಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಜಿಲ್ಲೆಯ ರಸ್ತೆಗಳಲ್ಲಿನ ಒತ್ತುವರಿಯನ್ನು ಗುರುತಿಸಿ, ತೆರವಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ
ಅವರು, ಅಗತ್ಯವಿರುವ ಕಡೆ ವೇಗನಿಯಂತ್ರಕ(ಹಂಪ್ಸ್) ನಿರ್ಮಾಣ ಮಾಡುವಂತೆಯೂ ನಿರ್ದೇಶನ ನೀಡಿದರು.

ರಸ್ತೆ ಬದಿಯಲ್ಲಿ ಕಸವಿಲೇವಾರಿಗೆ ಅಭಿಯಾನ ಹಮ್ಮಿಕೊಳ್ಳಿ ಮತ್ತು ಪಾದಾಚಾರಿ ಸಂಚಾರಕ್ಕೆ ಮೀಸಲಿಟ್ಟಿರುವ ಸ್ಥಳದಲ್ಲಿ ವ್ಯಾಪಾರ ನಡೆಸುತ್ತಿದ್ದರೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾದಲ್ಲಿ ಹಿಟ್ ಅಂಡ್ ರನ್ ಪ್ರಕರಣಕ್ಕೆ ಕಾರಣವಾಗುತ್ತದೆ. ಆದ್ದರಿಂದ ಪಾದಾಚಾರಿ ಮಾರ್ಗದಲ್ಲಿ ಯಾವುದೇ ವ್ಯಾಪಾರ ವಹಿವಾಟಿಗೆ ಅವಕಾಶ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ರಸ್ತೆ ಬದಿಯಲ್ಲಿ ಕಸ ಸುರಿಯುವವರ ಪತ್ತೆಹಚ್ಚಲು ಹಾಗೂ ಬೀದಿ ನಾಯಿಗಳ ಹಾವಳಿ ತಡೆಗೆ ಸಿಸಿಟಿವಿ ಅಳವಡಿಸಿಲು ತಾಕೀತು ಮಾಡಿದ ಜಿಲ್ಲಾಧಿಕಾರಿ. ರಸ್ತೆ ತಿರುವು ಮತ್ತು ಆಯಕಟ್ಟು ಮಾರ್ಗದಲ್ಲಿ ರಿಫ್ಲೆಕ್ಟೆರ್, ಕ್ಯಾಟ್ ಐಸ್ ಅಳವಡಿಸಿದಲ್ಲಿ ಸುಗಮ ಸಂಚಾರಕ್ಕೆ ನೆರವಾಗಲಿದೆ. ರಸ್ತೆ ಸುರಕ್ಷತೆಗಾಗಿ ಅಭಿಯಾನದ ಮೂಲಕ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ಹಾವಳಿ ತಪ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು ಬೇಲೂರಿನಲ್ಲಿ ಟ್ರಾಫಿಕ್ ಲೈಟ್ ಅಳವಡಿಸಲು ಕ್ರಮಕೈಗೊಳ್ಳಲು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರಮುನಿ ಅವರಿಗೆ
ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್, ಎನ್.ಹೆಚ್.ಎ.ಐ. ಯೋಜನಾ ನಿರ್ದೇಶಕ ಸೈಯದ್ ಹಾಜರಿದ್ದರು.

ಕಸವಿಲೇವಾರಿಗೆ ಅಭಿಯಾನ ಹಮ್ಮಿಕೊಳ್ಳಲು ಸೂಚನೆ ಪಾದಾಚಾರಿ ಮಾರ್ಗದಲ್ಲಿ ವ್ಯಾಪಾರಕ್ಕೆ ಅವಕಾಶ ಬೇಡ ಬೀದಿ ನಾಯಿಗಳ ಹಾವಳಿ; ಕ್ರಮವಹಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.