ADVERTISEMENT

ಹಾಸನ: ಜಿಲ್ಲೆಯಲ್ಲಿ ತುಂತುರು ಮಳೆ, ಮೋಡ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 5:55 IST
Last Updated 12 ಜನವರಿ 2026, 5:55 IST
<div class="paragraphs"><p>ತುಂತುರು ಮಳೆ ಸುರಿದ ವೇಳೆ ದ್ವಿಚಕ್ರ ವಾಹನದಲ್ಲಿ ಮಹಿಳೆಯರು ಸಾಗಿದರು &nbsp;</p></div>

ತುಂತುರು ಮಳೆ ಸುರಿದ ವೇಳೆ ದ್ವಿಚಕ್ರ ವಾಹನದಲ್ಲಿ ಮಹಿಳೆಯರು ಸಾಗಿದರು  

   

-ಪ್ರಜಾವಾಣಿ ಚಿತ್ರ

ಹಾಸನ: ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯಾದ್ಯಂತ ಹಲವು ತಾಲ್ಲೂಕುಗಳಲ್ಲಿ ತುಂತುರು ಮಳೆ ಹಾಗೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು.

ADVERTISEMENT

ಚನ್ನರಾಯಪಟ್ಟಣ, ಅರಕಲಗೂಡು, ಆಲೂರು, ಹಿರೀಸಾವೆ, ನುಗ್ಗೇಹಳ್ಳಿ, ಹಾಸನ ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿದ್ದು, ಬೇಲೂರು, ಸಕಲೇಶಪುರ, ಹೊಳೆನರಸೀಪುರ ತಾಲ್ಲೂಕುಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ.

ರಾತ್ರಿ ವೇಳೆ ಮಳೆಯಾಗಿದ್ದು, ಬೆಳಿಗ್ಗೆ ಮೋಡ ಕವಿದ ವಾತಾವರಣ ಮುಂದುವರಿದಿತ್ತು. ಇದರಿಂದಾಗಿ ಚಳಿ ಹಾಗೂ ಶೀತದ ಗಾಳಿ ಹೆಚ್ಚಾಗಿದೆ. ಕಾಫಿ ಬೀಜಗಳನ್ನು ಒಣಗಿಸುವುದು ಹಾಗೂ ರಾಗಿ ಸೇರಿದಂತೆ ಇತರೆ ಬೆಳೆಗಳ ಕಟಾವಿನಲ್ಲಿ ರೈತರಿಗೆ ತೊಂದರೆ ಉಂಟಾಗಿದೆ. ಚಳಿ ಹಾಗೂ ಶೀತದ ವಾತಾವರಣದಿಂದ ಕೆಮ್ಮು, ಶೀತ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಜನರು ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಬೆಚ್ಚನೆಯ ಉಡುಪು ಧರಿಸುವುದು ಹಾಗೂ ಆರೋಗ್ಯ ಸಂಬಂಧಿತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.