ADVERTISEMENT

ಗಣೇಶ ಮೆರವಣಿಗೆ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ– ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 17:47 IST
Last Updated 12 ಸೆಪ್ಟೆಂಬರ್ 2025, 17:47 IST
ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ   

ಹಾಸನ: ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.