ಕೃಷ್ಣ ಭೈರೇಗೌಡ
ಬೆಂಗಳೂರು: ಹಾಸನದ ಶಾಂತಿಗ್ರಾಮ ಬಳಿ ಗಣಪತಿ ಮೆರವಣಿಗೆಯಲ್ಲಿ ಟ್ರಕ್ ಹರಿದು ಸಂಭವಿಸಿದ ದುರಂತದ ಸ್ಥಳಕ್ಕೆ ಹೆಚ್ಚುವರಿ KSRP ತುಕಡಿ ನೇಮಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.
ಈ ಕುರಿತು ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಮೃತಪಟ್ಟವರಿಗೆ ತಲಾ 5 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ದುರಂತಕ್ಕೆ ಕಾರಣನಾದ ಟ್ರಕ್ ಚಾಲಕ ಭುವನ್ ವಿರುದ್ಧ ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ KSRP ತುಕಡಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ
ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಸರಕು ಲಾರಿ ನುಗ್ಗಿದ್ದು, ಕನಿಷ್ಠ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿತ್ತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್ ಲಾರಿಗೆ ಬೈಕ್ ಅಡ್ಡ ಬಂದಿದೆ.
ಇದನ್ನು ತಪ್ಪಿಸಲು ಕ್ಯಾಂಟರ್ ಚಾಲಕ ಯತ್ನಿಸಿದ್ದಾನೆ. ಈ ವೇಳೆ ರಸ್ತೆ ವಿಭಜಕ ದಾಟಿದ ಕ್ಯಾಂಟರ್ ಲಾರಿ ಮೆರವಣಿಗೆ ಮೇಲೆ ಎರಗಿದೆ. ಈ ವೇಳೆ ಸ್ಥಳದಲ್ಲಿದ್ದ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ ಮೃತರಾದ ವಿವರವನ್ನು ಸರ್ಕಾರ ಹಂಚಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.