
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಲಾರಿ ನುಗ್ಗಿ 9 ಜನ ಸಾವು: ಹಾಸನದಲ್ಲಿ ಘೋರ ದುರಂತ..
ಹಾಸನ: ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಸರಕು ಲಾರಿ ನುಗ್ಗಿದ್ದು, ಕನಿಷ್ಠ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿತ್ತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್ ಲಾರಿಗೆ ಬೈಕ್ ಅಡ್ಡ ಬಂದಿದೆ.
ಇದನ್ನು ತಪ್ಪಿಸಲು ಕ್ಯಾಂಟರ್ ಚಾಲಕ ಯತ್ನಿಸಿದ್ದಾನೆ. ಈ ವೇಳೆ ರಸ್ತೆ ವಿಭಜಕ ದಾಟಿದ ಕ್ಯಾಂಟರ್ ಲಾರಿ ಮೆರವಣಿಗೆ ಮೇಲೆ ಎರಗಿದೆ. ಈ ವೇಳೆ ಸ್ಥಳದಲ್ಲಿದ್ದ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ ಮೃತರಾದ ವಿವರವನ್ನು ಸರ್ಕಾರ ಹಂಚಿಕೊಂಡಿದೆ.
ಸ್ಥಳಕ್ಕೆ ಭೇಟಿ ನೀಡಿದ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ‘ಇದೊಂದು ದುರದೃಷ್ಟಕರ ಘಟನೆ. ಇಲ್ಲಿ ಹಲವರು ಮೃತಪಟ್ಟಿರುವುದಾಗಿ ಮಾಹಿತಿ ಬಂದಿದೆ. ಈ ಘಟನೆ ಆಗಬಾರದಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂಕ್ತ ತನಿಖೆಯ ನಂತರ ಸ್ಪಷ್ಟ ಕಾರಣ ತಿಳಿಯಲಿದೆ’ ಎಂದರು.
ಸ್ಥಳಕ್ಕೆ ಶಾಸಕ ಎಚ್.ಡಿ. ರೇವಣ್ಣ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.