ADVERTISEMENT

ಸರ್ಕಾರದ ವೈಫಲ್ಯ ತಿಳಿಸಲು ಜೆಡಿಎಸ್‌ನಿಂದ ಸಮಾವೇಶ: ಎಚ್‌.ಡಿ.ರೇವಣ್ಣ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 7:25 IST
Last Updated 9 ಜನವರಿ 2026, 7:25 IST
ಎಚ್.ಡಿ.ರೇವಣ್ಣ
ಎಚ್.ಡಿ.ರೇವಣ್ಣ   

ಹಾಸನ: ಹಾಸನ: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದ್ದು, ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಜಿಲ್ಲೆಗೆ ಈ ಸರ್ಕಾರದ ಕೊಡುಗೆ, ಸಾಧನೆ ಏನು ಎಂಬುದನ್ನು ಜಿಲ್ಲೆಯ ಜನರಿಗೆ ಮನದಟ್ಟು ಮಾಡುವುದು ಮತ್ತು ಮುಂಬರುವ ಚುನಾವಣೆಗೆ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಸಮಾವೇಶಕ್ಕೆ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಸುರೇಶ್ ಬಾಬು, ಪರಿಷತ್ ವಿಪಕ್ಷ ನಾಯಕ ಭೋಜೇಗೌಡ, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು ಭಾಗಿಯಾಗಲಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದರು.

2 ಲಕ್ಷ ಜನ ಸೇರುವ ಸಮಾವೇಶವನ್ನು ನಗರದ ಬಿಎಂ ರಸ್ತೆ ಪಕ್ಕದ ಕೆಐಎಡಿಬಿಗೆ ಸೇರಿದ ಜಾಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಅಗತ್ಯ ಶುಲ್ಕ ಸಹ ಪಾವತಿ ಮಾಡಲಾಗಿದೆ ಎಂದರು.

ADVERTISEMENT

ದೇವೇಗೌಡರು, ಕುಮಾರಸ್ವಾಮಿ, ನಾನು ಸೇರಿದಂತೆ ಜಿಲ್ಲೆಗೆ ನಮ್ಮ ಪಕ್ಷದ ಕೊಡುಗೆ ದೊಡ್ಡದಿದೆ. ಅದನ್ನು ಜನರಿಗೆ ಹೇಳುತ್ತೇವೆ. ಈ ಮೂಲಕ ಪ್ರಾದೇಶಿಕ ಪಕ್ಷ ಉಳಿಸಿ ಎಂದು ಮನವಿ ಮಾಡುತ್ತೇವೆ. ನಮ್ಮದು ಪ್ರಾದೇಶಿಕ ಪಕ್ಷ, ನಾಯಕರನ್ನು ಬೆಳೆಸುವ ಪಕ್ಷ. ಆದರೆ ರಾಷ್ಟ್ರೀಯ ಪಕ್ಷದವರು ನಾವು ಬೆಳೆಸಿದವರನ್ನು ಕರೆದುಕೊಂಡು ಹೋಗುತ್ತಾರೆ ಎಂದು ಕುಟುಕಿದರು.

ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಮುಖಂಡರಾದ ಗಿರೀಶ್ ಚನ್ನವೀರಪ್ಪ, ಬದರಿಕೆರೆ ಜಯರಾಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಲ್ಲೂಕು ಮಟ್ಟದ ಸರಣಿ ಸಭೆ: ಲಿಂಗೇಶ್‌

ಜೆಡಿಎಸ್‌ ವತಿಯಿಂದ ಜ.24ರಂದು ನಗರದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಈ ಸಂಬಂಧ ಚರ್ಚಿಸಲು ತಾಲ್ಲೂಕು ಮಟ್ಟದ ಸರಣಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಲಿಂಗೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹಾಲಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ಕೋರ್ ಕಮಿಟಿ ಅಧ್ಯಕ್ಷರು, ವಿವಿಧ ತಾಲ್ಲೂಕುಗಳ ಕಾರ್ಯಕರ್ತರು ಸೇರಿದಂತೆ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ ಎಂದರು.

ಸಮಾವೇಶದ ಪೂರ್ವಭಾವಿಯಾಗಿ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಶಾಸಕ ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಸಭೆಗಳು ನಡೆಯಲಿದ್ದು, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವೇಳಾಪಟ್ಟಿಯಂತೆ ಜ.11ರಂದು ಬೇಲೂರು ಹಾಗೂ ಮಧ್ಯಾಹ್ನ ದಂಡಿಗನಹಳ್ಳಿಯಲ್ಲಿ, ಜ.12ರಂದು ಸಕಲೇಶಪುರ ಹಾಗೂ ಹೊಳೆನರಸೀಪುರ, ಜ.13ರಂದು ಆಲೂರಿನಲ್ಲಿ ಸಭೆಗಳು ನಡೆಯಲಿವೆ. ಸಂಕ್ರಾಂತಿ ನಂತರ ಜ.17ರಂದು ಅರಕಲಗೂಡು, ಅರಸೀಕೆರೆ, ನಂತರ ಹಾಸನದಲ್ಲಿ ಕಾರ್ಯಕರ್ತರ ಸಭೆಗಳನ್ನು ಆಯೋಜಿಸಲಾಗುತ್ತದೆ ಎಂದರು.

ರೇವಣ್ಣ ಅವರು ಅರಸೀಕೆರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಸುದ್ದಿಯ ಕುರಿತು ಪ್ರತಿಕ್ರಿಯಸಿ, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ರೇವಣ್ಣ ತಮ್ಮದೇ ಆದ ಅಭಿವೃದ್ಧಿ ಕೊಡುಗೆ ನೀಡಿದ್ದಾರೆ. ಅಭಿಮಾನಿಗಳ ಆಶಯಗಳೂ ಇವೆ. ಆದರೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ತಾಲೂಕು ಘಟಕದ ಅಧ್ಯಕ್ಷ ಎಸ್. ದ್ಯಾವೇಗೌಡ, ಎಚ್‌ಡಿಸಿಸಿ ಮಾಜಿ ಅಧ್ಯಕ್ಷ ಸತೀಶ್, ಲಕ್ಷ್ಮಣೇಗೌಡ, ಸಮೀರ್ ಅಹಮದ್, ರಘು ಇದ್ದರು.

ಸರ್ಕಾರ ವೈಫಲ್ಯ ತಿಳಿಸಲು ಸಮಾವೇಶ: ರೇವಣ್ಣ

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದ್ದು, ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಜಿಲ್ಲೆಗೆ ಈ ಸರ್ಕಾರದ ಕೊಡುಗೆ, ಸಾಧನೆ ಏನು ಎಂಬುದನ್ನು ಜಿಲ್ಲೆಯ ಜನರಿಗೆ ಮನದಟ್ಟು ಮಾಡುವುದು ಮತ್ತು ಮುಂಬರುವ ಚುನಾವಣೆಗೆ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಸಮಾವೇಶಕ್ಕೆ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಸುರೇಶ್ ಬಾಬು, ಪರಿಷತ್ ವಿಪಕ್ಷ ನಾಯಕ ಭೋಜೇಗೌಡ, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು ಭಾಗಿಯಾಗಲಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದರು.

2 ಲಕ್ಷ ಜನ ಸೇರುವ ಸಮಾವೇಶವನ್ನು ನಗರದ ಬಿಎಂ ರಸ್ತೆ ಪಕ್ಕದ ಕೆಐಎಡಿಬಿಗೆ ಸೇರಿದ ಜಾಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಅಗತ್ಯ ಶುಲ್ಕ ಸಹ ಪಾವತಿ ಮಾಡಲಾಗಿದೆ ಎಂದರು.

ದೇವೇಗೌಡರು, ಕುಮಾರಸ್ವಾಮಿ, ನಾನು ಸೇರಿದಂತೆ ಜಿಲ್ಲೆಗೆ ನಮ್ಮ ಪಕ್ಷದ ಕೊಡುಗೆ ದೊಡ್ಡದಿದೆ. ಅದನ್ನು ಜನರಿಗೆ ಹೇಳುತ್ತೇವೆ. ಈ ಮೂಲಕ ಪ್ರಾದೇಶಿಕ ಪಕ್ಷ ಉಳಿಸಿ ಎಂದು ಮನವಿ ಮಾಡುತ್ತೇವೆ. ನಮ್ಮದು ಪ್ರಾದೇಶಿಕ ಪಕ್ಷ, ನಾಯಕರನ್ನು ಬೆಳೆಸುವ ಪಕ್ಷ. ಆದರೆ ರಾಷ್ಟ್ರೀಯ ಪಕ್ಷದವರು ನಾವು ಬೆಳೆಸಿದವರನ್ನು ಕರೆದುಕೊಂಡು ಹೋಗುತ್ತಾರೆ ಎಂದು ಕುಟುಕಿದರು.

ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಮುಖಂಡರಾದ ಗಿರೀಶ್ ಚನ್ನವೀರಪ್ಪ, ಬದರಿಕೆರೆ ಜಯರಾಂ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.