ಹಾಸನ: ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್ ಕಚೇರಿಯ ಲೆಕ್ಕ ವಿಭಾಗದ ಅಧೀಕ್ಷಕ ರಾಮಚಂದ್ರು ಹಾಗೂ ಪ್ರಥಮ ದರ್ಜೆ ಸಹಾಯಕಿ ಲತಾ ಅವರು ಲಂಚ ಪಡೆಯುತ್ತಿದ್ದಾಗ, ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದರು.
ಕಾಮಗಾರಿ ಬಿಲ್ ಮಂಜೂರಾತಿಗಾಗಿ ಬೇಲೂರಿನ ಶಶಿ ಎಂಬುವವರಿಂದ ತಲಾ ₹ 1 ಸಾವಿರ ಪಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು. ಇನ್‌ಸ್ಪೆಕ್ಟರ್‌ಗಳಾದ ಚಂದ್ರಶೇಖರ್ ಮತ್ತು ಶಿಲ್ಪಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.