ಹಾಸನ: ಮೃತಪಟ್ಟವರಲ್ಲಿ ಯುವಕರೇ ಹೆಚ್ಚಿದ್ದಾರೆ. ಅವರ ಕುಟುಂಬಗಳು ಬಡತನದಲ್ಲಿವೆ. ನಾನು ಪರಿಹಾರ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ರಾಜಕೀಯ ಮಾಡಲು ಇಲ್ಲಿಗೆ ಬಂದಿಲ್ಲ. ಈ ಕುರಿತು ರಾಜ್ಯ ಸರ್ಕಾರದ ಜೊತೆ ಮಾತನಾಡುತ್ತೇನೆ. ಮೃತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಒತ್ತಾಯಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.
ಶನಿವಾರ ಮೊಸಳೆಹೊಸಳ್ಳಿಗೆ ಭೇಟಿ ನೀಡಿದ ಅವರು, ಇಂತಹ ಘಟನೆ ನಡೆಯಬಾರದಿತ್ತು. ಇಡೀ ರಾಜ್ಯದ ಜನ ದಿಗ್ಬ್ರಾಂತರಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಸ್ಪಂದಿಸಿವೆ ಎಂದರು.
ಪೊಲೀಸರು ಕ್ರಮ ಕೈಗೊಂಡಿದ್ದರೂ ಜನರ ಮೇಲೆ ಟ್ರಕ್ ಹರಿದಿದೆ. ಇಂತಹ ಮೆರವಣಿಗೆಗಳು ನಡೆಯಬೇಕಾದರೆ ಇನ್ನೂ ಹೆಚ್ಚು ಪೊಲೀಸ್ ಬಂದೋಬಸ್ತ್ ಮಾಡಬೇಕಿತ್ತು. ಹಂಪ್ ಹಾಕಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಹಂಪ್ ಹಾಕಲು ಹೇಳುತ್ತೇನೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.