ಹಾಸನ: ಮೊಸಳೆ ಹೊಸಹಳ್ಳಿ ಸಂಭವಿಸಿದ ದುರಂತದಲ್ಲಿ 8 ಜನರು ಮೃತಪಟ್ಟಿದ್ದು, 25 ಜನರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಖಚಿತ ಪಡಿಸಿದ್ದಾರೆ.
ಘಟನೆಯಲ್ಲಿ 18 ಜನರಿಗೆ ಹಾಸನದ ಹಿಮ್ಸ್‌ನಲ್ಲಿ ಹಾಗೂ 7 ಜನರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ, ಎಸ್ಪಿಯವರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆಯಲಾಗುತ್ತಿದೆ. ಗಾಯಾಳುಗಳಿಗೆ ಗುಣಮಟ್ಟದ ಹಾಗೂ ತ್ವರಿತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ನಾನು ಶನಿವಾರ ಬೆಳಿಗ್ಗೆ ಹಾಸನಕ್ಕೆ ಭೇಟಿ ನೀಡುತ್ತಿದ್ದು, ಗಾಯಾಳುಗಳನ್ನು ಭೇಟಿ ಮಾಡಲಿದ್ದೇನೆ. ಅಲ್ಲದೇ ಮೃತರ ಕುಟುಂಬಗಳಿಗೂ ಸಾಂತ್ವನ ಹೇಳುವುದಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.