
ಪ್ರಜಾವಾಣಿ ವಾರ್ತೆ
ಹಾಸನ: ಅರಕಲಗೂಡು ತಾಲ್ಲೂಕಿನ ಮತ್ತಿಗೋಡಿನಲ್ಲಿ ಶುಕ್ರವಾರ ಬೆಳಗಿನ ಜಾವ 5.30 ರ ವೇಳೆಯಲ್ಲಿ ಮಳೆಯಿಂದ ಮನೆಯ ಶಿಥಿಲ ಗೋಡೆ ಕುಸಿದು ಜವರಮ್ಮ (63) ಎಂಬವರು ಮೃತಪಟ್ಟರು. ಅವರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರಿನ ಕೆರೆ ಭರ್ತಿಯಾಗಿ ಕೋಡಿ ಹರಿದಿದೆ. ಬಾಗೂರು ಬೈಪಾಸ್ ರಸ್ತೆಯಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ತೆಂಗಿನ ತೋಟ ಜಲಾವೃತವಾಗಿದ್ದವು.
ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಹೇಮಾವತಿ ಜಲಾಶಯ ಮತ್ತೊಮ್ಮೆ ಜಲಾಶಯ ಭರ್ತಿಯಾಗಿದೆ. 12 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಮಳೆ ಆಧರಿಸಿ, ಇನ್ನೂ ನೀರನ್ನು ನದಿಗೆ ಬಿಡಲಾಗುವುದು ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.