ADVERTISEMENT

ಹಾಸನಾಂಬಾ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಡಿ.ಸಿ ಆರ್.ಗಿರೀಶ್

ಹಾಸನಾಂಬಾ ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 15:22 IST
Last Updated 23 ಅಕ್ಟೋಬರ್ 2021, 15:22 IST
ಹಾಸನಾಂಬ ದೇವಾಲಯಕ್ಕೆ ಜಿಲ್ಲಾಧಿಕಾರಿ ಆರ್.ಗಿರೀಶ್‌ ಭೇಟಿ ನೀಡಿ, ಸಿದ್ಧತೆ ಪರಿಶೀಲಿಸಿದರು. ಆರ್‌.ಶ್ರೀನಿವಾಸ್ ಗೌಡ, ಬಿ.ಎ.ಜಗದೀಶ್‌, ಕೃಷ್ಣಮೂರ್ತಿ ಇದ್ದಾರೆ.
ಹಾಸನಾಂಬ ದೇವಾಲಯಕ್ಕೆ ಜಿಲ್ಲಾಧಿಕಾರಿ ಆರ್.ಗಿರೀಶ್‌ ಭೇಟಿ ನೀಡಿ, ಸಿದ್ಧತೆ ಪರಿಶೀಲಿಸಿದರು. ಆರ್‌.ಶ್ರೀನಿವಾಸ್ ಗೌಡ, ಬಿ.ಎ.ಜಗದೀಶ್‌, ಕೃಷ್ಣಮೂರ್ತಿ ಇದ್ದಾರೆ.   

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವವನ್ನು ಸುಲಲಿತವಾಗಿ ನಡೆಸಲು ಅಗತ್ಯ ಸಿದ್ಧತೆ ಕ್ರಮ ಕೈಗೊಳ್ಳು ವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹಾಸನಾಂಬಾ ದೇವಾಲಯಕ್ಕೆ ಶನಿವಾರ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಹೂವಿನ ಅಲಂಕಾರ, ದೀಪಾಲಂಕಾರ, ಬ್ಯಾರಿಕೇಡ್‌ ಅಳವಡಿಕೆಗೆ ಕ್ರಮವಹಿಸು ವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರವನ್ನು ಆಕರ್ಷಕವಾಗಿ ಮಾಡುವುದರ ಜೊತೆಗೆ
ಕೋವಿಡ್ ಲಸಿಕೆ ಪಡೆಯಿರಿ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಎಂಬ ವ್ಯಾಕ್ಯಗಳನ್ನು ವಿದ್ಯುತ್
ದೀಪಗಳಿಂದ ಮೂಡಿಬರುವಂತೆ ವ್ಯವಸ್ಥಿತವಾಗಿ ಮಾಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಉಪವಿಭಾಗಾಧಿಕಾರಿ ಬಿ.ಎ.ಜಗದೀಶ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಡಿ.ವೈ.ಎಸ್.ಪಿ ಪುಟ್ಟಸ್ವಾಮಿ ಗೌಡ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಸುರೇಶ್, ತಹಶೀಲ್ದಾರ್ ನಟೇಶ್, ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಂಗಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.