ADVERTISEMENT

ಹಾಸನಾಂಬೆ ನೇರ ದರ್ಶನ ಇಲ್ಲ

ನ.5 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 11:52 IST
Last Updated 8 ಅಕ್ಟೋಬರ್ 2020, 11:52 IST
ಹಾಸನಾಂಬೆ ದೇವಿ (ಸಂಗ್ರಹ ಚಿತ್ರ)
ಹಾಸನಾಂಬೆ ದೇವಿ (ಸಂಗ್ರಹ ಚಿತ್ರ)   

ಹಾಸನ: ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ವರ್ಷಕ್ಕೊಮ್ಮೆ ದರುಶನ ಕರುಣಿಸುವ ಹಾಸನಾಂಬೆ ನೇರ ದರ್ಶನಕ್ಕೆ ಈ ಬಾರಿ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನ. 5 ರಿಂದ 17ರವರೆಗೆ ದೇಗುಲದ ಬಾಗಿಲು ತೆರೆಯಲಿದ್ದು, ನಗರದ 12 ಕಡೆ ಎಲ್‌ಇಡಿ ಪರದೆ ಅಳವಡಿಸಿ ದರ್ಶನ ನೇರ ಪ್ರಸಾರ ಮಾಡಲಾಗುವುದು. ಹೊರ ಜಿಲ್ಲೆ ಹಾಗೂ ರಾಜ್ಯದವರಿಗೆ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ದರ್ಶನ ಭಾಗ್ಯ ಕಲ್ಪಿಸಲಾಗುವುದು ಎಂದು ಹೇಳಿದರು.

ಜಾತ್ರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗುವುದು. ಮೊದಲ ಹಾಗೂ ಕೊನೆಯ ದಿನ ಜನಪ್ರತಿನಿಧಿಗಳಿಗೆ ಮಾತ್ರ ನೇರ ದರ್ಶನಕ್ಕೆ ಅವಕಾಶಕಲ್ಪಿಸಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.