ADVERTISEMENT

ಹಾಸನದಲ್ಲಿ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 14:38 IST
Last Updated 21 ಮಾರ್ಚ್ 2019, 14:38 IST

ಹಾಸನ: ಹಲವು ತಿಂಗಳ ಬಳಿಕ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಗುರುವಾರ ಸಂಜೆ ಸಾಧಾರಣ ಮಳೆಯಾಗಿದೆ.

ನಗರದಲ್ಲಿ ಗುಡುಗು ಸಹಿತ ಅರ್ಧ ತಾಸು ಮಳೆಯಾಯಿತು. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿಸಿತು. ಆರಂಭದಲ್ಲಿ ತುಂತುರು ಹನಿ ಬೀಳಲಾರಂಭಿಸಿತು. ಸ್ವಲ್ಪ ಹೊತ್ತಿನ ಬಳಿಕ ಜೋರಾಯಿತು. ತಾಲ್ಲೂಕಿನ ಮೊಸಳೆ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.

ಮಳೆಯಿಂದ ರಕ್ಷಣೆ ಪಡೆಯಲು ಕೆಲವರು ಕಟ್ಟಡ ಮತ್ತು ರಸ್ತೆ ಬದಿ ಮರಗಳ ಕೆಳಗೆ ಆಶ್ರಯ ಪಡೆದರು. ಕೆಲಸದ ನಿಮಿತ್ತ ಗ್ರಾಮಾಂತರ ಪ್ರದೇಶದಿಂದ ನಗರಕ್ಕೆ ಬಂದಿದ್ದವರು ತೊಯ್ದುಕೊಂಡು ಹೋದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.