ADVERTISEMENT

ಯೋಜನೆ ಅನುಷ್ಠಾನಕ್ಕೆ ಗಮನ ನೀಡಿ: ಸೋಮನಹಳ್ಳಿ ನಾಗರಾಜ್

ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಯಶಸ್ವಿನಿ ಆರೋಗ್ಯ ವಿಮಾ ತರಬೇತಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 4:33 IST
Last Updated 21 ಫೆಬ್ರುವರಿ 2026, 4:33 IST
ಹಾಸನದ ಸಹಕಾರ ಇಲಾಖೆಯಲ್ಲಿ ಆಯೋಜಿಸಿದ್ದ ತರಬೇತಿಯನ್ನು ಸೋಮನಹಳ್ಳಿ ನಾಗರಾಜ್‌ ಉದ್ಘಾಟಿಸಿದರು.
ಹಾಸನದ ಸಹಕಾರ ಇಲಾಖೆಯಲ್ಲಿ ಆಯೋಜಿಸಿದ್ದ ತರಬೇತಿಯನ್ನು ಸೋಮನಹಳ್ಳಿ ನಾಗರಾಜ್‌ ಉದ್ಘಾಟಿಸಿದರು.   

ಹಾಸನ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಹಾಸನ ಜಿಲ್ಲಾ ಸಹಕಾರ ಯೂನಿಯನ್‌ ಮತ್ತು ಸಹಕಾರ ಇಲಾಖೆ ಆಶ್ರಯದಲ್ಲಿ ಹಾಸನ ಉಪ ವಿಭಾಗದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಕುರಿತಾ ವಿಶೇಷ ತರಬೇತಿ ಶಿಬಿರ ಬುಧವಾರ ನಡೆಯಿತು.

ಉದ್ಘಾಟಿಸಿ ಮಾತನಾಡಿದ ಎಚ್‌ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್, ಸಹಕಾರ ಸಂಘಗಳಲ್ಲಿ ಸಿಇಒ ಮತ್ತು ಕಾರ್ಯದರ್ಶಿಗಳ ಪಾತ್ರ ಮುಖ್ಯವಾಗಿದ್ದು, ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ₹5 ಲಕ್ಷದವರೆಗೆ ರೈತರಿಗೆ ಉಪಯೋಗ ಒದಗಿಸಲಿದೆ. ಈ ಯೋಜನೆಯನ್ನು ರೈತರ ಅನುಕೂಲಕಾಗಿ ಅನುಷ್ಠಾನಕ್ಕೆ ತರಲಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಹಾಸನ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಎಸ್.ಎನ್.ಪ್ರಕಾಶ್ ಮಾತನಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು, ಪಟ್ಟಣ ಮತ್ತು ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳೂ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಆ ಮೂಲಕ ಗ್ರಾಮೀಣ ಮತ್ತು ಪಟ್ಟಣ ವಾಸಿಗಳು ಸಹಕಾರ ಸಂಘಗಳ ಸದಸ್ಯರಿಗೆ ನೆರವಾಗಬೇಕು ಎಂದರು.

ADVERTISEMENT

ಹಾಸನ ಜಿಲ್ಲಾ ಸಹಕಾರ ಯೂನಿಯನ್‌ ನಿರ್ದೇಶಕರಾದ ವಿ.ಎನ್.ರಾಜಣ್ಣ, ಪುಟ್ಟಸ್ವಾಮಿಗೌಡ, ಸೋಮಣ್ಣ, ಎಚ್‌ಡಿಸಿಸಿ ಬ್ಯಾಂಕಿನ ಎಲ್ಲ ಕ್ಷೇತ್ರಾಧಿಕಾರಿಗಳು, ಹಾಸನ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ, ಟೆಕ್ನಿಕಲ್ ಹೆಡ್, ಸುಮುಖ ಟೆಕ್ನಾಲಜಿಸ್‌ನ, ಅನೂಪ್ ಬಲರಾಮು, ಸಹಕಾರ ಸಂಘಗಳ ಉಪನಿಬಂಧಕ ಕೆ.ಕೆ. ಕಿರಣ್ ಕುಮಾರ್, ನಿರ್ದೇಶಕ ಜಿ.ಎಚ್.ಸಿದ್ದೇಶ್, ಯೂನಿಯನ್‌ನ ಸಿಇಒ ಭಾರತಿ, ವಾಣಿ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.