ಹೃದಯಾಘಾತ
ಬೇಲೂರು: ತಾಲ್ಲೂಕಿನ ಹಗರೆ ಗ್ರಾಮದ ನ್ಯಾಯಬೆಲೆ ಅಂಗಡಿ ಎದುರು ಕುಳಿತಿದ್ದ ಕಾರ್ಮಿಕ, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಗರೆ ಸಮೀಪದ ಅಡವಿಬಂಟೇನಹಳ್ಳಿ ಗ್ರಾಮದ ನಿರ್ವಾಣೆಗೌಡ (63) ಮೃತಪಟ್ಟ ವ್ಯಕ್ತಿ. ಹಗರೆಯ ನ್ಯಾಯಬೆಲೆ ಅಂಗಡಿಯೊಂದರಲ್ಲಿ ಅಕ್ಕಿ ವಿತರಿಸುವ ಕೂಲಿ ಕೆಲಸಕ್ಕೆ ಬರುತ್ತಿದ್ದರು. ಎಂದಿನಂತೆ ಕೆಲಸಕ್ಕೆ ಬಂದಿದ್ದ ಅವರು, ನ್ಯಾಯಬೆಲೆ ಅಂಗಡಿ ಪಕ್ಕದ ಮೆಟ್ಟಿಲುಗಳ ಮೇಲೆ ಕುಳಿತಿದ್ದಾಗ, ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಪಕ್ಕಕ್ಕೆ ಜಾರಿದ್ದಾರೆ. ಸ್ಥಳೀಯರು ಮಾತನಾಡಿಸಲು ಮುಂದಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.