ಹೃದಯಾಘಾತ
ಹಾಸನ: ಜಿಲ್ಲೆಯಲ್ಲಿ ಹೃದಯಘಾತದಿಂದ ಸೋಮವಾರ ಮೂವರು ಮೃತಪಟ್ಟಿದ್ದಾರೆ. ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಮೆಣಸಿನಮಕ್ಕಿ ಗ್ರಾಮದಲ್ಲಿ ಲಕ್ಷ್ಮಣ್ (52) ಮನೆಗೆ ಬಂದಾಗ ಎದೆನೋವು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಕೂಡಲೇ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ವಾಹನವು ಮನೆಯ ಬಳಿ ಬರುವಷ್ಟರಲ್ಲಿ ಲಕ್ಷ್ಮಣ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ನಗರದ ಅಮೀರ್ ಮೊಹಲ್ಲಾ ವಾಸಿ ಮೋಹಿತ್ (53 ) ಅವರಿಗೆ ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಅರಸೀಕೆರೆ ತಾಲ್ಲೂಕಿನ ಬೆಳಗುಂಬ ಗ್ರಾಮದಲ್ಲಿ ಸುರೇಶ್ (52) ಅವರಿಗೆ ಬೆಳಗಿನ ಜಾವ 5 ಗಂಟೆಗೆ ಎದೆನೋವು ಕಾಣಿಸಿಕೊಂಡಿದ್ದು, ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.