ADVERTISEMENT

ಹಾಸನ | ಹೃದಯಾಘಾತ: ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 1:42 IST
Last Updated 7 ಜುಲೈ 2025, 1:42 IST
   

ಹೊಳೆನರಸೀಪುರ: ತಾಲ್ಲೂಕಿನ ಕೊಂಗಲಬೀಡು ಗ್ರಾಮದ ಐಚನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಆನಂದ(44) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿದ್ದಾಗ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಕರೆತರುವಾಗ ಮಾರ್ಗಮಧ್ಯೆ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ ಇದ್ದಾನೆ.

ಕಾರಿನಲ್ಲಿ ಕುಳಿತಾಗಲೇ ಹೃದಯಾಘಾತ: ಸಾವು

ಹಾಸನ: ಬೆಂಗಳೂರಿನ ಜಯನಗರದ ನಿವಾಸಿ ರಂಗನಾಥ್ (57) ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಚಲಿಸುತ್ತಿದ್ದ ಕಾರಿನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ರಂಗನಾಥ್ ಅವರು ತಮ್ಮ ಪತ್ನಿ ಮತ್ತು ಪುತ್ರಿಯೊಂದಿಗೆ ಮಂಗಳೂರಿನ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ದರು. ರಂಗನಾಥ್ ಅವರ ಪುತ್ರಿಯೇ ಕಾರನ್ನು ಚಲಾಯಿಸುತ್ತಿದ್ದರು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ರಂಗನಾಥ್‌ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕಾರನ್ನು ನಿಲ್ಲಿಸಿ, ಸಾರ್ವಜನಿಕರ ಸಹಕಾರದಿಂದ ತಕ್ಷಣವೇ ಸಮೀಪದ ಹಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿಯೇ ರಂಗನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದರು.

ADVERTISEMENT

ಅರಸೀಕೆರೆ: ತಾಲ್ಲೂಕಿನ ದುಮೇನ ಹಳ್ಳಿಯ ಎಚ್.ರಾಮಜ್ಜೇಗೌಡರು (87) ಭಾನುವಾರ ಹೃದಯಾಘಾತದಿಂದ ನಿಧನರಾದರು.

ಅವರಿಗೆ ನಾಲ್ವರು ಪುತ್ರಿಯರು, ಪುತ್ರ ಇದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ವಿವಿಧ ಸಂಘ ಸಂಸ್ಥೆಳು ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ ಸ್ವಗ್ರಾಮ ದುಮ್ಮೇನಹಳ್ಳಿಯಲ್ಲಿ ಬೆ.10.30ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.