ಹೃದಯಾಘಾತ
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದಿಂದ ನಾಲ್ವರು ಮೃತಪಟ್ಟಿದ್ದಾರೆ. ಇದರಲ್ಲಿ ಇಬ್ಬರು 70 ವರ್ಷ ಮೇಲಿನ ವೃದ್ಧರಾಗಿದ್ದಾರೆ.
ಆಲೂರು ತಾಲ್ಲೂಕಿನ ಕಲ್ಲಾರೆ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ (41) ಬುಧವಾರ ರಾತ್ರಿ ಮಲಗಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಗರದ ಕರಿಗೌಡ ಕಾಲೊನಿಯ ಸಂಪತ್ ಕುಮಾರ್ (53) ಹೃದಯಾಘಾತದಿಂದ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಚಿಕ್ಕನಾಯಕನಹಳ್ಳಿ ಗ್ರಾಮದ ಸಿ.ಬಿ.ವಿರೂಪಾಕ್ಷ (70), ಸಕಲೇಶಪುರ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ದೇವಮ್ಮ (72) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಒಂದೂವರೆ ತಿಂಗಳಲ್ಲಿ ಜಿಲ್ಲೆಯಾದ್ಯಂತ 30 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ತಜ್ಞರ ತಂಡ, ಮೃತರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದು, ಸೋಮವಾರ ಅಥವಾ ಮಂಗಳವಾರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.