ಹೊಳೆನರಸೀಪುರ: ಪಟ್ಟಣದ ಪೇಟೆ ಮಡಿವಾಳ ಬಡಾವಣೆಯ ನಿವಾಸಿ, ಟೈಲರ್ ವೆಂಕಟೇಶ್ ಹಾಗೂ ಪೂರ್ಣಿಮಾ ದಂಪತಿ ಪುತ್ರಿ ಸಂಧ್ಯಾ (19) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸ್ನಾನಕ್ಕೆಂದು ಹೋದ ಸಂಧ್ಯಾ ಎಷ್ಟೊತ್ತಾದರೂ ಹೊರಗೆ ಬಾರದಿದ್ದಾಗ ಪೋಷಕರು ಕೂಗಿ ಬಾಗಿಲು ಬಡಿದಿದ್ದಾರೆ. ಎಷ್ಟು ಬಡಿದರೂ ಬಾಗಿಲು ತೆರೆಯದ ಕಾರಣ ಬಾಗಿಲನ್ನು ಹಾರೆಯಿಂದ ಮೀಟಿ ತೆಗೆದು ಒಳಗೆ ಹೋಗಿ ನೋಡಿದಾಗ ಸಂಧ್ಯಾ ಬಚ್ಚಲು ಮನೆಯಲ್ಲಿ ಬಿದ್ದಿದ್ದರು. ತಕ್ಷಣ ಸಾರ್ವಜಿನಿಕ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಸಂಧ್ಯಾ ಮೃತಪಟಿರುವುದನ್ನು ದೃಢ ಪಡಿಸಿದ್ದಾರೆ.
ಸಂಧ್ಯಾ ಡಿಪ್ಲೊಮಾ ವ್ಯಾಸಂಗ ಮಾಡಿದ್ದರು. ಕೆಲವು ವರ್ಷಗಳಿಂದ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಮಂಗಳವಾರ ಸಂಜೆವೇಳೆಗೆ ಅಂತ್ಯಕ್ರಿಯೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.