ADVERTISEMENT

ಗುಡುಗು ಸಹಿತ ಮಳೆ ಆರ್ಭಟ

​ಪ್ರಜಾವಾಣಿ ವಾರ್ತೆ
Published 24 ಮೇ 2022, 15:34 IST
Last Updated 24 ಮೇ 2022, 15:34 IST
ಹಾಸನದ ಚನ್ನಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನೀರು ನಿಂತಿರುವುದು.
ಹಾಸನದ ಚನ್ನಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನೀರು ನಿಂತಿರುವುದು.   

‌‌ಹಾಸನ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

ಮಧ್ಯಾಹ್ನ 3 ಗಂಟೆಗೆ ಶುರುವಾದ ಮಳೆ ಅರ್ಧ ತಾಸಿಗೂ ಹೆಚ್ಚು ಸುರಿಯಿತು. ಶಾಲಾ ಆವರಣದಲ್ಲಿ ನೀರು ನಿಂತು ಮಕ್ಕಳ ಓಡಾಟಕ್ಕೂ ತೊಂದರೆ ಆಯಿತು. ಬಿ.ಎಂ. ರಸ್ತೆಯಲ್ಲಿ ನೀರು ನಿಂತು ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೂ ಅಡ್ಡಿಯಾಯಿತು. ಹಲವರು ಮರದ ಕೆಳಗೆ ನಿಂತು ಮಳೆಯಿಂದ ರಕ್ಷಣೆ ಪಡೆದರು.

‌ನಿರಂತರ ಮಳೆಯಿಂದಾಗಿ ಜನರು ಚಳಿಯಿಂದ ನಡುಗುತ್ತಿದ್ದಾರೆ. ಮಕ್ಕಳು ರೇನ್‌ ಕೋಟ್‌ ಧರಿಸಿ ಓಡಾಡಿದರು. ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿರುವ ನಡುವೆ ಮಳೆ ಸುರಿಯುತ್ತಿರುವ ಕಾರಣ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.

ADVERTISEMENT

ಆಲೂರು, ಸಕಲೇಶಪುರ, ಹೆತ್ತೂರು ಭಾಗದಲ್ಲಿ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.