ಶಿರಾಡಿ ಘಾಟ್ (ಸಂಗ್ರಹ ಚಿತ್ರ)
ಹಾಸನ: ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಾಸನದಿಂದ ಮಾರನಹಳ್ಳಿಯವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಬೆಂಗಳೂರು-ಮಂಗಳೂರು ಹೆದ್ದಾರಿಯ ಹಾಸನದಿಂದ ಮಾರನಹಳ್ಳಿವರೆಗಿನ ರಸ್ತೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 18 ರಿಂದ ರಸ್ತೆ ದುರಸ್ತಿ ಕಾರ್ಯ ಮುಗಿಯುವವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು, ಬದಲಿ ರಸ್ತೆಯಾದ ಹಾಸನ-ಬೇಲೂರು-ಮೂಡಿಗೆರೆ– ಚಾರ್ಮುಡಿ ಘಾಟ್ ಮಾರ್ಗವನ್ನು ಬಳಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.