
ಪ್ರಜಾವಾಣಿ ವಾರ್ತೆಹಾಸನ: ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆ ಮುಂದುವರಿದಿದೆ.
ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಕೋಟೆಯ ಕಲ್ಲುಗಳು ಮಳೆಯಿಂದಾಗಿ ಸಡಿಲಗೊಂಡು ಬಿದ್ದಿವೆ. ಕೆಲವು ಕಲ್ಲುಗಳು ಮೆಟ್ಟಿಲಕೆಳಗೆ ಬಿದ್ದಿದ್ದು,ಯಾವುದೇ ಅನಾಹುತ ಆಗಿಲ್ಲ. ಸದ್ಯಕ್ಕೆ ದೇವಾಲಯ ಪ್ರವೇಶ ನಿರ್ಬಂಧಿಸಲಾಗಿದೆ.
ಶ್ರವಣಬೆಳಗೊಳದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಒಳಚರಂಡಿ ತುಂಬಿ ರಸ್ತೆಗಳು ಹಳ್ಳದಂತಾಗಿದ್ದವು. ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಮನೆಗಳಿಗೆ ನೀರು ನುಗ್ಗಿದ್ದು, ಜನತೆ ಆತಂಕದಲ್ಲಿದ್ದಾರೆ.
ಅರಕಲಗೂಡು ತಾಲ್ಲೂಕಿನ ಕೊಣನೂರಿನಲ್ಲೂ ಧಾರಾಕಾರ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.