ಹಾಸನ: ಹಾಸನ ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಧಾರಾಕಾರ ಮಳೆ ಸುರಿಯಿತು.
ಚನ್ನರಾಯಪಟ್ಟಣ ತಾಲ್ಲೂಕಿನ ಚನ್ನರಾಯಪಟ್ಟಣ, ನುಗ್ಗೇಹಳ್ಳಿ, ಹಿರೀಸಾವೆ, ಶ್ರವಣಬೆಳಗೊಳ, ಅರಕಲಗೂಡು, ಕೊಣನೂರು, ಹೊಳೆನರಸೀಪುರ, ಅರಸೀಕೆರೆ ತಾಲ್ಲೂಕಿನಲ್ಲಿ ಬಿರುಸಿನ ಮಳೆಯಾಗಿದೆ.
ಧಾರಾಕಾರ ಮಳೆಯಿಂದಾಗಿ ಹಿರೀಸಾವೆ ಬಳಿ ರಾಷ್ಟ್ರೀಯ ಹೆದ್ದಾರಿ ಅಂಡರಪಾಸ್ ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.