ADVERTISEMENT

ಹೆಚ್ಚಿನ ಸಮಯ ದರ್ಶನಕ್ಕೆ ನೀಡಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ

ಹಾಸನಾಂಬೆ ಮಹೋತ್ಸವ ಸಿದ್ಧತೆ ಸಭೆಯಲ್ಲಿ ಡಿ.ಸಿ ರೋಹಿಣಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2018, 14:18 IST
Last Updated 29 ಅಕ್ಟೋಬರ್ 2018, 14:18 IST
ಹಾಸನಾಂಬ ಜಾತ್ರಾ ಮಹೋತ್ಸವ ಕುರಿತು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳ ಸಭೆ ನಡೆಸಿದರು.
ಹಾಸನಾಂಬ ಜಾತ್ರಾ ಮಹೋತ್ಸವ ಕುರಿತು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳ ಸಭೆ ನಡೆಸಿದರು.   

ಹಾಸನ: ಹಾಸನಾಂಬ ದೇವಿ ದರ್ಶನೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.

ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವ ಭಾವಿ ಸಿದ್ಧತಾ ಪರಿಶೀಲನಾ ಸಭೆ ಅಧಕ್ಷತೆ ವಹಿಸಿ ಮಾತನಾಡಿ, ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡಬೇಕು.

ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸಮರ್ಪಕವಾಗಿರಬೇಕು. ವಿಶೇಷ ದರ್ಶನ, ಅಂಗವಿಕಲರು, ವೃದ್ಧರಿಗೆ ಪ್ರತ್ಯೇಕ ಸಾಲುಗಳನ್ನು ಮಾಡುವಂತೆ ನಿರ್ದೇಶನ ನೀಡಿದರು.

ADVERTISEMENT

ಈ ಬಾರಿ ಏಳು ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರುವುದರಿಂದ ಪ್ರತಿದಿನ ಹೆಚ್ಚಿನ ಸಮಯ ದರ್ಶನಕ್ಕೆ ಅವಕಾಶವಾಗುವಂತಾಗಬೇಕು. ಸೌಟ್ಸ್, ಗೈಡ್ಸ್ ಹಾಗೂ ಆರೋಗ್ಯ ಇಲಾಖೆ ಸೇವೆಯನ್ನು ಸಮರ್ಪಕವಾಗಿ ಒಳಸಿಕೊಳ್ಳಬೇಕು ಎಂದು ಹೇಳಿದರು.

ಪತ್ರಿ ದಿನ ಸಂಜೆ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಮನ ಹರಿಸಬೇಕು. ಅದೇ ರೀತಿ ಪ್ರವಾಸಿಗರಿಗೆ ನಿಗದಿತ ದಿನದಲ್ಲಿ ಹಾಸನ ಜಿಲ್ಲಾದರ್ಶನಕ್ಕೆ ವಾಹನ ವ್ಯವಸ್ಥೆಗೆ ಪ್ರವಾಸೋದ್ಯಮ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಹೆಲಿ ಟೂರಿಸಂ ಈ ಬಾರಿ ಆಕರ್ಷಣಿಯಾಗಲಿದ್ದು, ಅದಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಇಲಾಖಾ ಅಧಿಕಾರಿಗಳು ಮಹೋತ್ಸವ ಯಶಸ್ಸಿಗೆ ಶ್ರಮಿಸಬೇಕು. ನಗರದಲ್ಲಿ ಸ್ವಚ್ಛತಾ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭದ್ರತಾ ವ್ಯವಸ್ಥೆ ಬಗ್ಗೆ ವಿವರಿಸಿದ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಗೌಡ, ಜಿಲ್ಲೆಯ ಪೊಲೀಸ್ ಸಿಬ್ಬಂದಿ ಬಳಸಿಕೊಂಡು ಶಾಂತಿ ಸುವ್ಯವಸ್ಥೆಗೆ ಕ್ರಮ ಕೈಗೊಳಲಾಗುವುದು ಎಂದರು.

ದೇವಸ್ಥಾನದ ಆಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜ್ ಅವರು ಈ ವರೆಗಿನ ಸಿದ್ಧತೆಗಳು, ಹೊಸ ಮಾರ್ಪಾಡುಗಳ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.