ADVERTISEMENT

ಹಾಸನ | ಹೆಲ್ಮೆಟ್ ಧರಿಸದಿದ್ದರೆ ಅಮಾನತು: ಪೊಲೀಸ್‌ ಸಿಬ್ಬಂದಿಗೆ ಎಸ್ಪಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 8:36 IST
Last Updated 7 ಡಿಸೆಂಬರ್ 2022, 8:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು. ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ಸಂಚಾರ ನಿಯಮ ಪಾಲಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಪೊಲೀಸರೇ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿರುವ ಬಗ್ಗೆ ವ್ಯಾಪಕ ದೂರು ಕೇಳಿಬಂದಿದೆ ಎಂದಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೊರಡಿಸಿರುವ ಸುತ್ತೋಲೆ

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ದ್ವಿಚಕ್ರ ವಾಹನ ಚಲಿಸುವಾಗ ಹೆಲ್ಮೆಟ್ ಧರಿಸದೇ ಇರುವುದು ಕಂಡುಬಂದಲ್ಲಿ ಸಂಚಾರ ನಿಯಮದ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.