ಹಾಸನ: ‘ಅಭಿಮಾನಿಗಳು ಮತ್ತು ಕಾರ್ಯಕರ್ತರು ನನ್ನ ಜನ್ಮದಿನವಾದ ಮೇ 18ರಂದು ಸಡಗರ, ಸಂಭ್ರಮದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಾರದು. ಕೋವಿಡ್‌ನಿಂದ ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕು’ ಎಂದು ಮಾಜಿ ಪ್ರಧಾನಿಎಚ್.ಡಿ. ದೇವೇಗೌಡ ಮನವಿ ಮಾಡಿದ್ದಾರೆ.
‘ಕೋವಿಡ್‌ನಿಂದ ಇಡೀ ರಾಜ್ಯದ ಜನತೆ ಸಂಕಷ್ಟ ಮತ್ತು ನೋವಿನಲ್ಲಿ ತತ್ತರಿಸುತ್ತಿರುವಾಗ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಅಭಿಮಾನ ಹಾರೈಕೆ ರೂಪದಲ್ಲಿ ನೀವಿರುವಲ್ಲಿಯೇ ವ್ಯಕ್ತವಾಗಲಿ’ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಈಗ ಸಾಮಾಜಿಕ ಜವಾಬ್ದಾರಿ ಮತ್ತು ಮಾನವೀಯತೆ ತೋರಿಸುವ ಸಮಯದಲ್ಲಿದ್ದೇವೆ.ಆದ್ದರಿಂದ ಹುಟ್ಟುಹಬ್ಬದ ನಿಮಿತ್ತ ಹಾರ, ತುರಾಯಿ, ಕೇಕ್, ಸಿಹಿ ಎಂದು ಅನಗತ್ಯವಾಗಿದುಂದು ವೆಚ್ಚ ಮಾಡುವ ಬದಲಿಗೆ ಅದನ್ನೇ ಕೊರೊನಾ ಸಂತ್ರಸ್ತರಿಗೆ ನೆರವಿನ ರೂಪದಲ್ಲಿಅವರ ಅಗತ್ಯಗಳ ಪೂರೈಕೆಗೆ ಬಳಸಿದಲ್ಲಿ ಅದು ನಿಜಕ್ಕೂ ಸದುಪಯೋಗವಾಗುತ್ತದೆ. ದೇವರು ಮೆಚ್ಚುತ್ತಾನೆ. ಅಭಿಮಾನಿಗಳ ಈ ಸೇವಾ ಕಾರ್ಯ ನನಗೂ ಸಂತೋಷ ನೀಡುತ್ತದೆ. ಅಭಿಮಾನಿಗಳು ಮತ್ತು ಕಾರ್ಯಕರ್ತರು ನನ್ನ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು’ ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.