ADVERTISEMENT

ಹೇಮಾವತಿ ಜಲಾಶಯ: 45-50 ಸಾವಿರ ಕ್ಯುಸೆಕ್‌ ನೀರು ನದಿಗೆ; ಪ್ರವಾಹದ ಮುನ್ನೆಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 8:11 IST
Last Updated 25 ಜುಲೈ 2024, 8:11 IST
   

ಹಾಸನ: ಹೇಮಾವತಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಗೊರೂರಿನ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮದಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.

ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 45 ಸಾವಿರದಿಂದ 50 ಸಾವಿರ ಕ್ಯುಸೆಕ್‌ ನೀರನ್ನು ಹೇಮಾವತಿ ನದಿಗೆ ಬಿಡಲಾಗುತ್ತಿದೆ. ಅಲ್ಲದೇ ಈ ಪ್ರಮಾಣವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ತಿಳಿಸಿದ್ದಾರೆ.

ಹೇಮಾವತಿ ನದಿ ತೀರದ ಹಾಗೂ ತಗ್ಗು ಪ್ರದೇಶಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಬೇಕು. ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.