ADVERTISEMENT

ಹೈಕೋರ್ಟ್‌ನಿಂದ ಸಮನ್ಸ್‌ ಬಂದಿಲ್ಲ: ಪ್ರಜ್ವಲ್‌

​ಪ್ರಜಾವಾಣಿ ವಾರ್ತೆ
Published 29 ಜುಲೈ 2019, 12:40 IST
Last Updated 29 ಜುಲೈ 2019, 12:40 IST

ಹಾಸನ: ‘ಲೋಕಸಭೆ ಚುನಾವಣೆ ವೇಳೆ ಚುನಾವಣಾಧಿಕಾರಿಗೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದ ಆರೋಪ ಸಂಬಂಧ ಹೈಕೋರ್ಟ್‌ನಿಂದ ಸಮನ್ಸ್‌ ಬಂದಿಲ್ಲ’ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಸ್ಪಷ್ಟಪಡಿಸಿದರು.‌

‘ಸಮನ್ಸ್‌ ಬಾರದ ಹೊರತು ಅದರ ಬಗ್ಗೆ ಚರ್ಚಿಸುವುದಿಲ್ಲ. ಸಮನ್ಸ್‌ ತಲುಪಿದಾಗ ಅದಕ್ಕೆ ಉತ್ತಿರುಸುತ್ತೇನೆ’ ಎಂದು ಸುದ್ದಿಗಾರರಿಗೆ ಹೇಳಿದರು.

ಸುಳ್ಳು ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನಲೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ಲೋಕಸಭೆ ಸದಸ್ಯತ್ವವನ್ನು ಅಸಿಂಧುಗೊಳಿಸುವಂತೆ ಕೋರಿ ಮಾಜಿ ಸಚಿವ ಎ.ಮಂಜು ಮತ್ತು ವಕೀಲ ಜಿ.ದೇವರಾಜೇಗೌಡ ಹೈಕೋರ್ಟ್‌ಗೆ ಪ್ರತ್ಯೇಕವಾಗಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.‌

ADVERTISEMENT

ಇದೇ ವೇಳೆ ಬಿಜೆಪಿ ಸರ್ಕಾರದ ಭವಿಷ್ಯ ಕುರಿತು ಕೇಳಿದ ಪ್ರಶ್ನೆಗೆ, ‘ಭವಿಷ್ಯ ಹೇಳಲು ನಾನು ಜ್ಯೋತಿಷಿ ಅಲ್ಲ. ಸರ್ಕಾರ ಎಷ್ಟು ವರ್ಷ ಉಳಿಯುತ್ತದೇ ಎಂಬುದನ್ನು ಕಾದು ನೋಡಬೇಕು. ರಾಜಕಾರಣದಲ್ಲಿ ಏನು ಬೇಕಾದರೂ ಆಗುತ್ತದೆ. ಇಂದು ಇದ್ದಂತೆ ನಾಳೆ ಇರುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.