ADVERTISEMENT

ಹಾಸನ ಜಿಲ್ಲೆಯಲ್ಲೂ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2019, 15:21 IST
Last Updated 17 ಆಗಸ್ಟ್ 2019, 15:21 IST
 ಹಾಸನ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಪ್ರಯಾಣಿಕರ ಬ್ಯಾಗ್‌ ತಪಾಸಣೆ ಮಾಡಿದರು.
 ಹಾಸನ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಪ್ರಯಾಣಿಕರ ಬ್ಯಾಗ್‌ ತಪಾಸಣೆ ಮಾಡಿದರು.   

ಹಾಸನ: ದೇಶದಲ್ಲಿ ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಉಪಗ್ರಹ ನಿಯಂತ್ರಣ ಕೇಂದ್ರ (ಎಂಸಿಎಫ್), ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮೊದಲಾದ ಕಡೆಗಳಲ್ಲಿ ಪೊಲೀಸರ ಹೈ ಅಲರ್ಟ್ ಮಾಡಲಾಗಿದೆ.

ಹಾಸನ ಹೊರ ವಲಯದ ಎಂ.ಸಿ.ಎಫ್ ನಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮೀಣ ಠಾಣೆ ಪೊಲೀಸರು ಹಾಗೂ ಸೇನಾ ತುಕಡಿ ನಿಯೋಜನೆ ಮಾಡಲಾಗಿದೆ.

ADVERTISEMENT

ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಎಲ್ಲೆಡೆ ಪರಿಶೀಲನೆ ನಡೆಸಿದರು. ಜಿಲ್ಲೆಯ ಹಲವು ಕಡೆ ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಮೇಲೆ ಹದ್ದಿನ‌ ಕಣ್ಣು ಇಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.