
ಸಾವು
(ಪ್ರಾತಿನಿಧಿಕ ಚಿತ್ರ)
ಹಿರೀಸಾವೆ: ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿರುವ ಘಟನೆ ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡೇರಿ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ.
ಹಿರೀಸಾವೆ ಹೋಬಳಿಯ ಮತಿಘಟ್ಟ ಗ್ರಾಮದ ಆನಂದರವರ ಪುತ್ರ ರಮೇಶ್ (23) ಮತ್ತು ನುಗ್ಗೇಹಳ್ಳಿ ಹೋಬಳಿಯ ಎಂ.ಹೊನ್ನೇನಹಳ್ಳಿಯ ರಂಗಸ್ವಾಮಿಯವರ ಮಗ ಪುರುಷೋತ್ತಮ (25) ಮೃತರು ಎಂದು ಗುರುತಿಸಲಾಗಿದೆ. ಮತಿಘಟ್ಟ ಗ್ರಾಮದ ಕಿರಣ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.
ರಮೇಶ್ ತನ್ನ ಸ್ನೇಹಿತ ಕಿರಣ್ ಜೋತೆಯಲ್ಲಿ ಬೈಕ್‌ನಲ್ಲಿ ಮಟ್ಟನವಿಲೆಗೆ ಎನ್ಎಚ್ 75ರ ಎಡಭಾಗದಲ್ಲಿ ಹೋಗುತ್ತಿದ್ದಾಗ, ಪುರುಷೋತ್ತಮ ವಿರುದ್ಧ ದಿಕ್ಕಿನಲ್ಲಿ (ರಾಂಗ್ ಸೈಡ್) ತನ್ನ ಬೈಕ್ ವೇಗವಾಗಿ ಓಡಿಸಿಕೊಂಡು ಬಂದು, ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇಬ್ಬರ ತಲೆಗೆ ತೀವ್ರ ಪೆಟ್ಟು ಬಿದ್ದು, ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಈ ಬಗ್ಗೆ ಹಿರೀಸಾವೆ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.