ADVERTISEMENT

ಹಿರೀಸಾವೆ: ವಿಶ್ವ ಯೋಗ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 14:21 IST
Last Updated 21 ಜೂನ್ 2025, 14:21 IST
ಹಿರೀಸಾವೆಯ ಪಿಎಂಶ್ರೀ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ಯೋಗಾಸನ ಮಾಡಿದರು 
ಹಿರೀಸಾವೆಯ ಪಿಎಂಶ್ರೀ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ಯೋಗಾಸನ ಮಾಡಿದರು    

‌ಹಿರೀಸಾವೆ: ಅಂತರರಾಷ್ಟ್ರಿಯ ಯೋಗ ದಿನಾಚರಣೆ ಪ್ರಯುಕ್ತ ಹಿರೀಸಾವೆ ಹೋಬಳಿಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಶನಿವಾರ ವಿದ್ಯಾರ್ಥಿಗಳು, ಶಿಕ್ಷಕರು ವಿವಿಧ ಯೋಗಾಸನ ಮಾಡಿದರು.

ಇಲ್ಲಿನ ಪಿಎಂಶ್ರೀ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದೈಹಿಕ ಶಿಕ್ಷಕ ದೇವರಾಜು ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳನ್ನು ಮಾಡಿದರು. ಸರ್ಕಾರಿ ಪ್ರೌಢಶಾಲೆಗಳು, ಕಿರಿಯ, ಹಿರಿಯ ಶಾಲೆಗಳು, ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಬೆಳಿಗ್ಗೆ ಪ್ರಾರ್ಥನೆಯ ನಂತರ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಶಾಲಾ ಮೈದಾನದಲ್ಲಿ ಯೋಗಾಸನಗಳನ್ನು ಮಾಡಿದರು. ಕೆಲವು ಶಾಲೆಗಳಲ್ಲಿ ಹಾಡುಗಳ ಮೂಲಕ ನೃತ್ಯ ಮಾದರಿಯಲ್ಲಿನ ಯೋಗಾಸನಗಳ ಪ್ರದರ್ಶನ ವಿಶೇಷವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT