ADVERTISEMENT

ಹೊಳೆನರಸೀಪುರ: ನರಸಿಂಹಸ್ವಾಮಿ ದೇವಾಲಯದಲ್ಲಿ ಆಷಾಢ ಪೂಜೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 14:30 IST
Last Updated 4 ಜುಲೈ 2025, 14:30 IST
ಹೊಳೆನರಸೀಪುರ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಎರಡನೇ ಆಷಾಢ ಶುಕ್ರವಾರದ ಪ್ರಯುಕ್ತ ವಿಶೇಷ ಪೂಜೆ ವಿಶೇಷ ಪೂಜೆ ಹೋಮ ನಡೆಯಿತು. ಅರ್ಚಕರಾದ ನಾರಾಯಣ, ರಾಮಪ್ರಸಾದ್  ಪ್ರಸಾದ್ ಪೂಜಾ ವಿಧಿ ವಿಧಾನ ನಡೆಸಿದರು.
ಹೊಳೆನರಸೀಪುರ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಎರಡನೇ ಆಷಾಢ ಶುಕ್ರವಾರದ ಪ್ರಯುಕ್ತ ವಿಶೇಷ ಪೂಜೆ ವಿಶೇಷ ಪೂಜೆ ಹೋಮ ನಡೆಯಿತು. ಅರ್ಚಕರಾದ ನಾರಾಯಣ, ರಾಮಪ್ರಸಾದ್  ಪ್ರಸಾದ್ ಪೂಜಾ ವಿಧಿ ವಿಧಾನ ನಡೆಸಿದರು.   

ಹೊಳೆನರಸೀಪುರ: ಇಲ್ಲಿನ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಎರಡನೇ ಆಷಾಢ ಶುಕ್ರವಾರದ ಪ್ರಯುಕ್ತ ಲಕ್ಷ್ಮೀದೇವಿಗೆ ವಿಶೇಷ ಪೂಜೆ ನಡೆಯಿತು.

ಬೆಳಗಿನ ಬ್ರಾಹ್ಮಿ ಮುಹೂರ್ತದಲ್ಲಿ ದೇವಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇದ್ಯ, ತಧಿ ಆರಾಧನೆ ಸೇವೆ, ಸಹಸ್ರ ನಾಮಾರ್ಚನೆ, ಮಂಗಳಾರತಿ ನೆರವೇರಿಸಿ ಪೂಜಿಸಿದರು.

ಬೆಳಗ್ಗೆ 10 ಗಂಟೆಯಿಂದ ದುರ್ಗಾಪರಮೇಶ್ವರೀ ಹೋಮ, ಮಹಿಳೆಯರಿಂದ ಸಾಮೂಹಿಕ ಲಕ್ಷ್ಮೀ ಪೂಜೆ, ಸಹಸ್ರನಾಮ, ಕುಂಕುಮಾರ್ಚನೆ, ಪೂರ್ಣಾಹುತಿ, ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ನೀಡಿದರು. ಅರ್ಚಕರಾದ ನಾರಾಯಣ, ರಾಮಪ್ರಸಾದ್, ಪ್ರಸಾದ್, ವಿಜಯ ಕುಮಾರ್, ಪೂಜಾ ವಿಧಿ ವಿಧಾನಗಳನ್ನು ನಡೆಸಿದರು. ಮಹಿಳೆಯರು ಶ್ರದ್ಧಾಭಕ್ತಿಯಿಂದ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.