ADVERTISEMENT

ಹೊಳೆನರಸೀಪುರ | ಲಕ್ಷ್ಮೀನರಸಿಂಹಸ್ವಾಮಿ ಪಲ್ಲಕ್ಕಿ ಉತ್ಸವ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 7:41 IST
Last Updated 27 ಫೆಬ್ರುವರಿ 2026, 7:41 IST
ಹೊಳೆನರಸೀಪುರದ ಲಕ್ಷ್ಮಿನರಸಿಂಹಸ್ವಾಮಿಯ ಪಲ್ಲಕ್ಕಿ ಉತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು 
ಹೊಳೆನರಸೀಪುರದ ಲಕ್ಷ್ಮಿನರಸಿಂಹಸ್ವಾಮಿಯ ಪಲ್ಲಕ್ಕಿ ಉತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು    

ಹೊಳೆನರಸೀಪುರ: ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವ ಮಾರ್ಚ್ 3ರಂದು ನಡೆಯಲಿದ್ದು, ಅದರ ಅಂಗವಾಗಿ ಗುರುವಾರ ಪಲ್ಲಕ್ಕಿ ಉತ್ಸವ ವಿಜ್ರಂಭಣೆಯಿಂದ ನೆರವೇರಿತು.

ದೇವಾಲಯದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇದ್ಯ, ತಧಿ ಆರಾಧನೆ, ಸಹಸ್ರ ನಾಮಾರ್ಚನೆ, ಮಂಗಳಾರತಿ ನೆರವೇರಿಸಿ, ಪಲ್ಲಕ್ಕಿ ಉತ್ಸವದ ಅಡ್ಡೆಯಲ್ಲಿ ಪರಿವಾರ ಸಮೇತ ಲಕ್ಷ್ಮೀನರಸಿಂಹಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ವಿಧಿವಿಧಾನಗಳನ್ನು ನಡೆಸಿ ರಥ ಬೀದಿಯಲ್ಲಿ ಉತ್ಸವ ಹಾಗೂ ದೇವಾಲಯದ ಪ್ರಹಾಂಗಣದಲ್ಲಿ ಪ್ರಾಕಾರೋತ್ಸವ ನಡೆಸಲಾಯಿತು. ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಹಿರಿಯ ಅರ್ಚಕರಾದ ರಾಮಸ್ವಾಮಿಭಟ್ಟರ ಮಾರ್ಗದರ್ಶನದಲ್ಲಿ ನಾರಾಯಣ ಭಟ್ಟರು, ರಾಮ ಪ್ರಸಾದ್, ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಪುರಸಭೆ ಮಾಜಿ ಅಧ್ಯಕ್ಷ ಎಚ್.ವಿ.ಪುಟ್ಟರಾಜು, ನಿಖಿಲ್, ಕಿಟ್ಟಿ ಉಪ್ಪಾರ್, ಗಿರೀಶ್ ಯಾದವ್, ಇತರರು ಉತ್ಸವದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT