ADVERTISEMENT

ಹನಿಟ್ರ್ಯಾಪ್‌ ನಿರ್ದೇಶಕ ಡಿ.ಕೆ. ಶಿವಕುಮಾರ್‌: ದೇವರಾಜೇಗೌಡ ಆರೋಪ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2025, 23:30 IST
Last Updated 21 ಮಾರ್ಚ್ 2025, 23:30 IST
<div class="paragraphs"><p>ಡಿ.ಕೆ. ಶಿವಕುಮಾರ್‌</p></div>

ಡಿ.ಕೆ. ಶಿವಕುಮಾರ್‌

   

ಹಾಸನ: ‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಅವರೇ ಇದರ ನಿರ್ದೇಶಕ. ಅಧಿಕಾರದ ಆಸೆಗಾಗಿ ಹಾಗೂ ‌ಅವರ ವಿರುದ್ಧ ಧ್ವನಿ ಎತ್ತಿದವರ ಸದ್ದಡಗಿಸಲು ಹೀಗೆ ಮಾಡಿದ್ದಾರೆ’ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ. ಶಿವಕುಮಾರ್ ಬಳಿ ಹನಿಟ್ರ್ಯಾಪ್‌ ಮಾಡುವ ತಂಡವಿದೆ. ಹನಿಟ್ರ್ಯಾಪ್ ಮಾಡಿ ಅದನ್ನು ಒಂದೆಡೆ ಗುಪ್ತವಾಗಿ ಇಡಲಾಗುತ್ತಿದೆ. ಅದನ್ನು ಪರಿಶೀಲಿಸುವವರೂ ಇದ್ದಾರೆ’ ಎಂದರು.

ADVERTISEMENT

‘ಹನಿಟ್ರ್ಯಾಪ್‌ಗೆ ಸಂಬಂಧಿಸಿ ಕೆಲವು ಮಹತ್ವದ ದಾಖಲೆಗಳು ನಮ್ಮಲ್ಲಿವೆ. ಅವನ್ನು ತಲುಪಿಸಬೇಕಾದವರಿಗೆ ತಲುಪಿಸಿಯಾಗಿದೆ. ಕೂಡಲೇ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು’ ಎಂದು ಆಗ್ರಹಿಸಿದರು.

‘ಒಂದು ವರ್ಷದ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಹನಿಟ್ರ್ಯಾಪ್ ಗ್ಯಾಂಗ್‌ಗೆ ಡಿ.ಕೆ.ಶಿವಕುಮಾರ್ ಅವರೇ ನಾಯಕರು. ಇದೀಗ ಅವರ ಪಕ್ಷದ ಸಚಿವರಿಗೆ ಸತ್ಯ ಗೊತ್ತಾಗಿದೆ. ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯತ್ನಿಸಿದವರ ಹನಿಟ್ರ್ಯಾಪ್ ಮಾಡಿದ್ದಾರೆ. ಅಧಿಕಾರಕ್ಕಾಗಿ ಮುಖ್ಯಮಂತ್ರಿಯನ್ನೇ ಹನಿಟ್ರ್ಯಾಪ್ ಮಾಡುತ್ತಾರೆ’ ಎಂದು ಆಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.