ADVERTISEMENT

ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ಪೂರೈಕೆ

ಮಲಗಲು ಮಂಚ ಇಲ್ಲ, ಅಡುಗೆಗೆ ಕೊಳೆತ ತರಕಾರಿ ಬಳಕೆ: ಆರೋಪ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2019, 14:29 IST
Last Updated 1 ಮಾರ್ಚ್ 2019, 14:29 IST
ಹಾಸನದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಯಲದ ವಿದ್ಯಾರ್ಥಿಗಳು ಕಳಪೆ ಆಹಾರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಹಾಸನದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಯಲದ ವಿದ್ಯಾರ್ಥಿಗಳು ಕಳಪೆ ಆಹಾರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.   

ಹಾಸನ : ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಸಮಾಜ ಕಲ್ಯಾಣ ಇಲಾಖೆ ನಡೆಸುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

‘ವಿದ್ಯಾರ್ಥಿ ನಿಲಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಹಲವು ದಿನಗಳಿಂದ ವಾರ್ಡನ್‌ ಗಮನಕ್ಕೆ ತಂದರೂ ಪ್ರಯೋಜನ ಆಗುತ್ತಿಲ್ಲ. ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಂಡರೂ ಇತ್ತ ಸುಳಿಯುತ್ತಿಲ್ಲ’ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

‘ರಾತ್ರಿ ಮತ್ತು ಮಧ್ಯಾಹ್ನದ ನೀಡು ಊಟ ಚನ್ನಾಗಿರುವುದಿಲ್ಲ. ಕೊಳೆತ ತರಕಾರಿ ಬಳಸಿ ಅಡುಗೆ ಮಾಡಲಾಗುತ್ತಿದೆ. ಮಂಚವಿಲ್ಲದೆ ನೆಲದ ಮೇಲೆ ಮಲಗಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ. ಗ್ರಂಥಾಲಯದಲ್ಲಿ ಪುಸ್ತಕಗಳು ಇಲ್ಲ. ಅಗತ್ಯ ಸೌಲಭ್ಯ ಹೊರತು ಪಡಿಸಿ ವಾಹನಗಳ ನಿಲುಗಡೆಗೆ ಚಾವಣಿ ನಿರ್ಮಾಣ ಮಾಡಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ಜಿಲ್ಲೆಯ ಬಹುತೇಕ ವಿದ್ಯಾರ್ಥಿ ನಿಲಯಗಳಲ್ಲಿ ಇದೇ ರೀತಿಯ ಸಮಸ್ಯೆ ಇದೆ. ಗುರುವಾರ ರಾತ್ರಿಯಿಂದಲೂ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಸಮಸ್ಯೆಗಳಿಗೆ ಸ್ಪಂದಿಸಿ ಮೂಲ ಸೌಕರ್ಯ ಒದಗಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಎಲ್ಲಾ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳಾದ ಲೋಕೇಶ್, ಪೃಥ್ವಿ, ವಿನಾಯಕ, ರವೀಂದ್ರ ಚೌಹಾಣ್, ರಘುನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.