ಹಳೇಬೀಡು: ಕೇಂದ್ರ ಪುರಾತತ್ವ ಇಲಾಖೆಯ ಅನುಮತಿ ದೊರೆಯದ ಕಾರಣ ಹೊಯ್ಸಳೇಶ್ವರ ಸ್ವಾಮಿಯ ರಾತ್ರಿ ದರ್ಶನಕ್ಕೆ ಭಕ್ತರಿಗೆ ಅವಕಾಶ ದೊರಕಿಲ್ಲ. ಭಕ್ತರು ಹಗಲಿನಲ್ಲಿಯೇ ನಡೆಯುವ ಪೂಜಾ ಕಾರ್ಯದಲ್ಲಿ ಭಾಗವಹಿಸಬೇಕು ಎಂದು ಹೊಯ್ಸಳೇಶ್ವರ ರಥೋತ್ಸವ ಸಮಿತಿ ಕಾರ್ಯದರ್ಶಿ ಎಂ.ಸಿ.ಕುಮಾರ್ ತಿಳಿಸಿದ್ದಾರೆ.
ಹೊಯ್ಸಳೇಶ್ವರ ದೇವಾಲಯದಲ್ಲಿ ಪ್ರತಿ ವರ್ಷ ಸಂಜೆ ನಡೆಯುತ್ತಿದ್ದ ಸ್ವಾಮಿಯವರ ಅಭಿಷೇಕ, ಪೂಜೆ ಮೊದಲಾದ ಧಾರ್ಮಿಕ ವಿಧಾನಗಳು ಮಾರ್ಚ್ 8 ಶುಕ್ರವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಂಜೆ 6.30ರ ವರೆಗೆ ನಡೆಯುತ್ತವೆ. ಸಂಜೆ 6.30ರ ನಂತರ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಭಕ್ತರು ಸಹಕರಿಸಬೇಕು ಎಂದು ಎಂ.ಸಿ.ಕುಮಾರ್ ವಿನಂತಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.