ADVERTISEMENT

ನಾಳೆಯಿಂದ ಹಾಸನಾಂಬೆ ದರ್ಶನ ಭಾಗ್ಯ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 12:27 IST
Last Updated 16 ಅಕ್ಟೋಬರ್ 2019, 12:27 IST
   

ಹಾಸನ: ವರ್ಷಕ್ಕೆ ಒಂದು ಬಾರಿಯಷ್ಟೇ ದರ್ಶನ ಭಾಗ್ಯ ಕರುಣಿಸುವ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಗುರುವಾರದಿಂದ ಚಾಲನೆ ದೊರೆಯಲಿದೆ.

ಸಂಪ್ರದಾಯದಂತೆ ಅಶ್ವಯುಜ ಮಾಸದ ಪೂರ್ಣಿಮೆಯ ನಂತರ ಮೊದಲ ಗುರುವಾರ ಮಧ್ಯಾಹ್ನ 12.30ಕ್ಕೆ ಅರಸು ವಂಶಸ್ಥ ನಂಜರಾಜ ಅರಸ್‌ ಬಾಳೆ ಕಂದು ಕಡಿದ ಬಳಿಕ ಅಮ್ಮನವರ ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ.

ಈ ಬಾರಿ ಅಕ್ಟೋಬರ್ 17 ರಿಂದ 29 ರ ವರೆಗೆ ದೇವಿಯ ದರ್ಶನೋತ್ಸವ ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರ್ಭಗುಡಿಯ ಬಾಗಿಲು ತೆರೆದ ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಮುನ್ನೆಚ್ಚರಿಗೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.