ಬೇಲೂರು: ಇಲ್ಲಿನ ಚನ್ನಕೇಶವಸ್ವಾಮಿ ದೇಗುಲದ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ, ಅಂತರರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ರಾಘವೇಂದ್ರ ಹಾಗೂ ಪತಂಜಲಿ ಯೋಗಕೇಂದ್ರದ ಯೋಗಪಟುಗಳು ಯೋಗಾಸನ ಪ್ರದರ್ಶನ ನೀಡಿದರು.
ಬೆಂಗಳೂರಿನ ನಿಮಾನ್ಸ್ ಆರೋಗ್ಯ ಕೆಂದ್ರದ ಡಾ. ನವೀನ್ ಕುಮಾರ್ ಮಾತನಾಡಿ, ‘ಯೋಗದ ಮೂಲ ಭಾರತ. ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಸುಯೋಗ ನಮ್ಮದು. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯನ್ನು ಸುಲಭದಲ್ಲಿ ಯೋಗದ ಮೂಲಕ ಎಲ್ಲರೂ ಪಡೆಯಬಹುದಾಗಿದೆ’ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಬಸವರಾಜು ಕಾಟಪ್ಪ ಶಿಗ್ಗಾವಿ, ದೇಗುಲದ ಇಒ ಯೊಗೇಶ್, ಶಿವಮರಿಯಪ್ಪ, ಡಾ. ಸುಧಾ, ಯೋಗ ಕೇಂದ್ರದ ಶಿಕ್ಷಕರು ಪಾಲ್ಗೊಂಡಿದ್ದರು. ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಸನ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.