ADVERTISEMENT

25 ಸಾವಿರ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ಮತ್ತೆ ಮೂವರ ಸಾವು, 210 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 14:19 IST
Last Updated 1 ನವೆಂಬರ್ 2020, 14:19 IST

ಹಾಸನ: ಜಿಲ್ಲೆಯಲ್ಲಿ ಶನಿವಾರ 144 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ
25,033ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಮೂರು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಜ್ವರ, ಉಸಿರಾಟದ ಸಮಸ್ಯೆಯಿಂದ ಜಿಲ್ಲಾ ಕೋವಿಡ್‌
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅರಸೀಕೆರೆಯ ಒಬ್ಬರು, ಬೇಲೂರು ತಾಲ್ಲೂಕಿನ ಇಬ್ಬರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಈವರೆಗೆ
ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 428 ತಲುಪಿದೆ.

1047 ಸೋಂಕಿತರು ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರ, ಹೋಂ ಐಸೋಲೇಷನ್‌ ನಲ್ಲಿ ಚಿಕಿತ್ಸೆ
ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 38 ಮಂದಿ ದಾಖಲಾಗಿದ್ದಾರೆ. ಭಾನುವಾರ ಬಿಡುಗಡೆಯಾದ 210 ಜನ ಸೇರಿದಂತೆ ಈವರೆಗೆ 23,558 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಹೊಸದಾಗಿ ಆಲೂರು 13, ಅರಕಲಗೂಡು 7, ಅರಸೀಕೆರೆ 11, ಬೇಲೂರು 15, ಚನ್ನರಾಯಪಟ್ಟಣ 35, ಹಾಸನ 46, ಹೊಳೆನರಸೀಪುರ 13, ಸಕಲೇಶಪುರ 4 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.