ADVERTISEMENT

ಕ್ರೈಸ್ತರಿಗೆ ರಕ್ಷಣೆ ನೀಡಲು ಒತ್ತಾಯ

ಡಿ.ಸಿ ಕಚೇರಿ ಎದುರು ಕಾಂಗ್ರೆಸ್‌ ಮುಖಂಡರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 5:02 IST
Last Updated 4 ಜನವರಿ 2022, 5:02 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ಹಾಸನ: ದೇಶದಲ್ಲಿ ಕ್ರಿಶ್ಚಿಯನ್ ಸಮುದಾಯದ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಸೋಮವಾರಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ದೇಶಲ್ಲಿ ಕ್ರೈಸ್ತ ಸಮುದಾಯದವರು ಶಾಂತಿ ಮತ್ತು ಸಹಬಾಳ್ವೆಯಿಂದ ಎಲ್ಲಾ ಸಮುದಾಯಗಳ ಜೊತೆಗೂಡಿ ಜೀವನ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ, ಕೆಲ ಮತೀಯ ದುಷ್ಕರ್ಮಿಗಳು ನಿರಂತರವಾಗಿ ದಾಳಿ ಮತ್ತು ದ್ವೇಷದ ಭಾಷಣಗಳನ್ನು ಮಾಡಿ ದೇಶದ ಏಕತೆಗೆ ಧಕ್ಕೆ ತರುವುದಲ್ಲದೆ ಧರ್ಮ ಧರ್ಮಗಳ ನಡುವೆ ದ್ವೇಷ ಬರುವಂತೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕು, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಚರ್ಚ್‌ಗಳ ಮೇಲೆ ದಾಳಿ ಮಾಡಿ ಏಸು ಕ್ರಿಸ್ತನ ಪ್ರತಿಮೆಗಳನ್ನು ಧ್ವಂಸ ಮಾಡಿರುವಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಚರ್ಚ್‌ ಪಾದ್ರಿಗಳ ಮೇಲೆ ಆಧಾರ ರಹಿತ ಆರೋಪ ಮಾಡುವುದು ಮತ್ತು ಕೇಸ್‌ ದಾಖಲಿಸುವುದನ್ನು ಕೂಡಲೇ ತಡೆಯಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್, ಕಾಂಗ್ರೆಸ್‌ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಸಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಾಲಿದ್ ಮನ್ಸೂರ್, ಜಿಲ್ಲಾ ಉಪಾಧ್ಯಕ್ಷ ಫೈರೋಜ್ ಗಾಂಧಿ, ಜಮೀರ್ ಅಹಮದ್, ಮುಖಂಡರಾದ ಎಚ್.ಕೆ. ಮಹೇಶ್, ದೇವರಾಜೇಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ತಾರಾ ಚಂದನ್, ಶೇಷಪ್ಪ, ಮುಬಾಶೀರ್ ಅಹಮದ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ರಂಜಿತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.